ಗೃಹಲಕ್ಷ್ಮೀ ಯೋಜನೆಯಿಂದ ಮಹಿಳಾ ಸಬಲೀಕರಣ

ರಾಯಚೂರು,ಆ.೩೧- ರಾಜ್ಯದ ಮಹಿಳಾ ಮಹಿಳಾ ಸಬಲೀಕರಣ, ಹಾಗೂ ಸ್ವಾವಲಂಬನೆಯ ಬದುಕಿನ ಉದ್ದೇಶದಿಂದ ಪ್ರತಿ ಮನೆಯ ಮಹಾಲಕ್ಷ್ಮೀ ಯಜಮಾನಿಗೆ ಪ್ರತಿ ತಿಂಗಳು ೨೦೦೦ ರೂ ನೀಡುವ ’ಗೃಹಲಕ್ಷ್ಮೀ’ ಯೋಜನೆಗೆ ಚಾಲನೆ ನೀಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ, ಇಂತಹ ಯೋಜನೆ ದೇಶದಲ್ಲಿ ಎಲ್ಲಿಯೂ ಇಲ್ಲ. ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಮೊಹ್ಮದ್ ಶಾಲಂ ಅವರು ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ ಹಾಗೂ ಜಿಲ್ಲಾಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಸಹಯೋಗದೊಂದಿಗೆ ರಾಗಿಮಾನ ಗಡ್ಡಾದಲ್ಲಿ ಆಯೋಜಿದ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಂತರ ನಗರಸಭೆ ಹಿರಿಯರಾದ ಜಯಣ್ಣ, ಶಾಂತಪ್ಪ ಅವರು ಮಾತನಾಡಿ, ಕಾಂಗ್ರೆಸ್ ನೀಡಿದ ೫ ಗ್ಯಟರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜೆನೆ ದೊಡ್ಡ ಯೋಜನೆಯಾಗಿದೆ. ಈ ಯೋಜನೆಗಳ ಕುರಿತು ಅನೇಕರು ಟೀಕೆ ಮಾಡಿದ್ದರು. ಆದರೆ ಕಾಂಗ್ರೆಸ್ ನೀಡಿದ ಎಲ್ಲಾ ಗ್ಯಾರಂಟಿ ಭರವಸೆಗಳನ್ನು ಜಾರಿಗೆ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತರಾದ ಸಿದ್ದಲಿಂಗಯ್ಯ ಹಿರೇಮಠ್, ಮೊಹ್ಮದ್ ಜಿಲಾನಿ, ರುದ್ರಪ್ಪ ಅಂಗಡಿ ಜಿ ಶಿವಮೂರ್ತಿ, ಸಚಿನ್ ಕುಮಾರ್ ಜಯಣ್ಣ, ರಜೀಯಾ ಬೇಗಂ ಸೇರಿ ಅನೇಕರು, ಮಹಿಳೆಯರು ಉಪಸ್ಥಿತರಿದ್ದರು.