ಗೃಹ ಸಚಿವರಿಂದ ಜನತಾ ದರ್ಶನ


ಶಿವಮೊಗ್ಗ, ನ.21: ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ಗೃಹ ಸಚಿವ ಆರಗ ಜ್ಞಾನೇಂದ್ರರವರು, ಭಾನುವಾರ ಬೆಳಿಗ್ಗೆ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೊಪ್ಪ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದರು. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ  ರಾಜ್ಯದ ವಿವಿಧೆಡೆ ಪ್ರವಾಸ ನಡೆಸಿದ್ದ ಸಚಿವರು, ಮಂಗಳೂರು ಮೂಲಕ ಮಧ್ಯರಾತ್ರಿ ತಮ್ಮ ಮನೆಗೆ ಆಗಮಿಸಿದ್ದರು. ಬೆಳಿಗ್ಗೆಯಿಂದಲೇ ತಮ್ಮ ಮನೆಗೆ ಆಗಮಿಸಿದ್ದ ನಾಗರೀಕರ ಅಹವಾಲು ಆಲಿಸಿದ ಸಚಿವರು, ಹಲವು ಸಮಸ್ಯೆಗಳಿಗೆ ಅಧಿಕಾರಿಗಳ ಜೊತೆ ಮೊಬೈಲ್ ನಲ್ಲಿ ಮಾತನಾಡಿ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿದರು.