ಗೃಹ ಸಚಿವರಿಗೆ ಸನ್ಮಾನ

ಕೋಲಾರ,ಜೂ.೧೫- ಬೆಂಗಳೂರಿನ ವಿಧಾನಸೌಧದಲ್ಲಿ ಕರ್ನಾಟಕ ಸರ್ಕಾರದ ನೂತನ ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಲಕ್ಷ್ಮೀನಾರಾಯಣ ಅವರ ನೇತೃತ್ವದಲ್ಲಿ ಅಭಿನಂದಿಸಲಾಯಿತು.
ಕೋಲಾರ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಕಿಸಾನ್ ಕೇತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಭಾಷ್ ಚಂದ್ರಗೌಡ, ಕಾರ್ಗಿಲ್ ವೆಂಕಟೇಶ್ ಇನ್ನಿತರರು ಉಪಸ್ಥಿತರಿದ್ದರು.