ಗೆಜ್ಜಲಗಟ್ಟಾ ಆರೋಗ್ಯ ಕೇಂದ್ರಕ್ಕೆ ವೈದ್ಯರ ನೇಮಕಕ್ಕೆ ಆಗ್ರಹ

ಲಿಂಗಸುಗೂರು : ತಾಲೂಕಿನ ಗೆಜ್ಜಲಗಟ್ಟಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯ ಹಾಗೂ ಸಿಬ್ಬಂದಿಗಳನ್ನು ನೇಮಕ ಮಾಡುವಂತೆ ಆಗ್ರಹಿಸಿ ಭಾರತ್ ವಿದ್ಯಾರ್ಥಿ ಫೆಡರೇಶನ್ ಕಾರ್ಯಕರ್ತರು ಶುಕ್ರವಾರ ತಾಲೂಕು ಆರೋಗ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಗೆಜ್ಜಲಗಟ್ಟಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ಮುಖ್ಯ ವೈದ್ಯರು, ನರ್ಸ ಹುದ್ದೆಗಳು ಖಾಲಿ ಇರುವುದರಿಂದ ಗ್ರಾಮೀಣ ಪ್ರದೇಶದ ರೋಗಿಗಳಿಗೆ ಚಿಕಿತ್ಸೆ ಮರಿಚಿಕೆಯಾಗಿದೆ. ಅಲ್ಲದೇ ಆಸ್ಪತ್ರೆಯಲ್ಲಿ ಕುಡಿವ ನೀರು, ಶೌಚಾಲಯ, ಬೆಡ್‌ಗಳಂತಹ ಕನಿಷ್ಠ ಮೂಲಭೂತ ಸೌಕರ್ಯಗಳು ಇಲ್ಲದೆ ನರಳುತ್ತಿದೆ. ಈ ಆಸ್ಪತ್ರೆಯನ್ನು ಮಾದರಿ ಆಸ್ಪತ್ರೆಯನ್ನಾಗಿ ಬದಲಾವಣೆ ಮಾಡಲು ಸೂಕ್ತ ರೀತಿಯ ತಿರ್ಮಾನಗಳನ್ನು ತೆಗೆದುಕೊಂಡು ಜನಸಾಮಾನ್ಯರಿಗೆ ಉಚಿತ ಆರೋಗ್ಯ ಸೇವೆ ಸಿಗುವಂತೆ ಮಾಡಬೇಕು. ಕುಡಿವ ನೀರು, ಕುರ್ಚಿ, ಪ್ಯಾನ್‌ಗಳು, ಬೆಡ್‌ಗಳ ವ್ಯವಸ್ಥೆ ಕಲ್ಪಿಸಬೇಕು. ಇಬ್ಬರು ಖಾಯಂ ವೈದ್ಯರು ಇರಬೇಕು. ನರ್ಸ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.
ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ರಮೇಶ ವೀರಾಪುರ, ತಿಪ್ಪಣ್ಣ ನಿಲೋಗಲ್, ಸುದೀಪ್‌ಕುಮಾರ ಹಾಗೂ ಇನ್ನಿತರಿದ್ದರು.