ಗೆಲುವು ನನ್ನದೆ: ಕುಸುಮ

ಬೆಂಗಳೂರು, ನ. ೩- ರಾಜರಾಜೇಶ್ವರಿನಗರ ಕ್ಷೇತ್ರದ ಉಪಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಗೆಲ್ಲುವ ವಿಶ್ವಾಸವನ್ನು ಕಾಂಗ್ರೆಸ್ ಅಭ್ಯರ್ಥಿ ಹೆಚ್. ಕುಸುಮಾ ವ್ಯಕ್ತಪಡಿಸಿದ್ದಾರೆ.
ಕ್ಷೇತ್ರದ ಮಲ್ಲತ್ತಹಳ್ಳಿಯ ಮತಗಟ್ಟೆಯಲ್ಲಿ ತಮ್ಮ ತಂದೆ ಹಾಗೂ ತಾಯಿ ಜತೆ ಮತ ಚಲಾವಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೊಂದವರ ಪರ, ಅಭಿವೃದ್ಧಿಪರ ಕೆಲಸ ಮಾಡುವವರಿಗೆ ಜನ ಮತ ಹಾಕುತ್ತಾರೆ ಎಂಬ ವಿಶ್ವಾಸವಿದೆ. ಹಾಗಾಗಿ ಈ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ ಎಂದು ಅವರು ಹೇಳಿದರು.
ನನ್ನ ಮತ ನನ್ನ ಹಕ್ಕು. ಹಾಗಾಗಿ ಪ್ರತಿಯೊಬ್ಬರು ಬಂದು ಮತ ಚಲಾಯಿಸಬೇಕು ಎಂದು ಮನವಿ ಮಾಡಿದ ಅವರು, ಯುವ ಜನಾಂಗ ಮತದಾನದಿಂದ ದೂರ ಇರಬಾರದು. ಯುವಜನತೆಯ ಪ್ರತಿನಿಧಿಯಾಗಿ ನಾನು ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಯುವಕರು ಬೆಂಬಲಿಸುವ ವಿಶ್ವಾಸವಿದೆ ಎಂದು ಅವರು ಹೇಳಿದರು.
ಆ???ರ್ ನಗರ ಕ್ಷೇತ್ರದ ಜನ ಪ್ರಜ್ಞಾವಂತರಿದ್ದಾರೆ ಹಾಗಾಗಿ ಅವರು ನೊಂದವರ ಪರ ಮತ್ತು ಅಭಿವೃದ್ಧಿಯಪರ ಕೆಲಸ ಮಾಡುವ ತಮ್ಮನ್ನು ಬೆಂಬಲಿಸಲಿದ್ದಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.