ಗೊರೂರು ಚಲನಚಿತ್ರೋತ್ಸವ

ಬೆಂಗಳೂರು ನಗರದ ಗಾಂಧಿ ಭವನದಲ್ಲಿರುವ ಮಹದೇವದೇಸಾಯಿ ಸಭಾಂಗಣದಲ್ಲಿ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ವತಿಯಿಂದ ಗಾಂಧಿವಾದಿ ಹಾಗೂ ಹಿರಿಯ ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ೧೧೯ನೇ ಜನ್ಮದಿನದ ಪ್ರಯುಕ್ತ ಗೊರೂರು ಚಲನಚಿತ್ರೋತ್ಸವ -೨೦೨೩ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಹೇಶ್ ಎನ್.ಎಸ್., ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ ಬಣಕಾರ, ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಮಗಳು ವಸಂತಿ ಮೂರ್ತಿ ಗೊರೂರು, ಬೆಂಗಳೂರು ನಗರ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿ ಡಾ. ಹೆಚ್.ಜಿ. ಗೋವಿಂದೇಗೌಡ, ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ, ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೆಚ್.ಚಂದ್ರಪ್ಪ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
ಗಾಂಧಿವಾದಿ ಹಾಗೂ ಹಿರಿಯ ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಕಾದಂಬರಿ ಆಧಾರಿತ ಬೂತಯ್ಯನ ಮಗ ಅಯ್ಯು ಮತ್ತು ಹೇಮಾವತಿ ಚಲನಚಿತ್ರಗಳು ಪ್ರದರ್ಶನಗೊಂಡವು.