ಗೊರೂರು ಜಲಾಶಯಕ್ಕೆ ಸಚಿವ ಗೋಪಾಲಯ್ಯ ಬಾಗಿನ ಅರ್ಪಣೆ

ಹಾಸನ: ಜು.೨೫; ಈ ವರ್ಷ ನಾಡಿನಾದ್ಯಂತ ಉತ್ತಮ ಮಳೆಯಾಗಿ ಎಲ್ಲ ಜಲಾಶಯಗಳು ತುಂಬಿರುವುದು ಸಂತೋಷದ ವಿಷಯ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಗೊರೂರು ಜಲಾಶಯಕ್ಕೆ ಬಾಗಿನ ಅರ್ಪಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಿನ ಪ್ರಮುಖ ಜಲಾಶಯಗಳಾದ ಕಬಿನಿ, ಕೆಆರ್‌ಎಸ್, ಹೇಮಾವತಿ ಜಲಾಶಯಗಳು ತುಂಬಿ ಎಲ್ಲೆಡೆ ಸಮೃದ್ಧಿ ನೆಲೆಸಿರುವುದು ರೈತರಲ್ಲಿ ಉತ್ಸಾಹ ಮೂಡಿಸಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ಹೆಚ್.ಕೆ ಕುಮಾರಸ್ವಾಮಿ, ಎ.ಟಿ ರಾಮಸ್ವಾಮಿ ಜಿಲ್ಲಾಧಿಕಾರಿ ಅರ್.ಗಿರೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾಂತರಾಜ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ಇಂಜಿನಿಯರ್ ಶಂಕರೇಗೌಡ,ಮುಖ್ಯ ಇಂಜಿನಿಯರ್ ಮಹೇಶ್, ಹೇಮಾವತಿ ಜಲಾಶಯ ವಿಭಾಗದ ಸೂಪರಿಂಟೆಂಡೆಂಟ್ ಇಂಜಿನಿಯರ್ ನಳಿನಿ, ಕಾರ್ಯಪಾಲಕ ಇಂಜಿನಿಯರ್ ಯೋಗೀಶ್ ಮತ್ತಿತರರು ಹಾಜರಿದ್ದರು