ಗೊಲ್ಲಹಳ್ಳಿ ಗ್ರಾಪಂ ಅಧ್ಯಕ್ಷೆಯಾಗಿ ಚೌಡಮ್ಮ ಶ್ರೀನಿವಾಸ

ಕೆಂಗೇರಿ,ಆ.೧೩-ಕೆ. ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಚೌಡಮ್ಮ ಶ್ರೀನಿವಾಸ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೃಷ್ಣಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶಾಸಕ ಎಸ್.ಟಿ. ಸೋಮಶೇಖರ್ ಮಾತನಾಡಿ ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷರಿಗೆ ಮತ್ತು ಉಪಾಧ್ಯಕ್ಷರಿಗೆ ಅಭಿನಂದಿಸಿದರು. ಈ ಗ್ರಾಮ ಪಂಚಾಯಿತಿಗೆ ಒಳಪಡುವ ಎಲ್ಲಾ ಗ್ರಾಮಗಳಲ್ಲಿರುವ ಮೂಲಭೂತ ಸೌಕರ್ಯಗಳ ಸಮಸ್ಯೆಯನ್ನು ನಿವಾರಿಸಿ ಸರ್ಕಾರದ ಯೋಜನೆಗಳನ್ನು ಪ್ರತಿಯೊಬ್ಬ ನಾಗರಿಕರಿಗೂ ತಲುಪಿಸುವಂತಹ ವ್ಯವಸ್ಥೆಯನ್ನು ಮಾಡಿ ಎಂದರು.
ಉಪಾಧ್ಯಕ್ಷರಾದ ಕೃಷ್ಣಮೂರ್ತಿ ಅವರು ಮಾತನಾಡಿ ನಮ್ಮ ಶಾಸಕರಾದ ಎಸ್. ಟಿ. ಸೋಮಶೇಖರ್ ಅವರ ಸಹಕಾರದೊಂದಿಗೆ ಈ ಭಾಗದಲ್ಲಿ ಅನೇಕ ಅಭಿವೃದ್ಧಿ ಪರ ಕೆಲಸಗಳಾಗಿವೆ ಹಾಗೆ ಮುಂದೆಯೂ ಅನೇಕ ಯೋಜನೆಗಳನ್ನು ಕಾರ್ಯರೂಪಕ್ಕೆ ತರುತ್ತೇವೆ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೃಷ್ಣಪ್ಪ, ಪ್ರಮೀಳಾ ಮಂಜುನಾಥ್, ತಾ.ಪಂ ಸದಸ್ಯ ಕೆ.ವೈ. ಶಿವಣ್ಣ, ಕೆ. ಗೊಲ್ಲಹಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷ ಆರ್. ಲಕ್ಷ್ಮಯ್ಯ, ಕೆ.ಎಂ. ಮಹೇಶ್, ಕಲಾವತಿ ಮಂಜುನಾಥ್, ನಾಗರತ್ನಮ್ಮ ಅಶ್ವಥಯ್ಯ, ಮಾಜಿ ಉಪಾಧ್ಯಕ್ಷ ರವಿಕುಮಾರ್, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಲೋಕೇಶ್,ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನರೇಂದ್ರಬಾಬು, ಕಾರ್ಯದರ್ಶಿ ಟಿ. ಶ್ರೀನಿವಾಸ್ ಉಪಸ್ಥಿತರಿದ್ದರು.