ಗೋಗಿ ಗ್ರಾಮದಲ್ಲಿ ಮತದಾನ ಜಾಗೃತಿ

ಶಹಾಪುರ:ಮಾ.10: ತಾಲೂಕಿನ ಗೋಗಿ ಕೆ ಗ್ರಾಮದಲ್ಲಿ ಮತದಾನ ಮಾಡುವ ಕುರಿತು ಜಾಗೃತಿ ಕಾರ್ಯಕ್ರಮವನ್ನು ತಾಲೂಕು ಪಂಚಾಯತ್ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯರಿಂದ ಮಾನವ ಸರಪಳಿ ನಿರ್ಮಿಸಿ ಎಲ್ಲಾ ಅರ್ಹರಿರುವ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಸೋಮಶೇಖರ ಬಿರೆದಾರ ಕಾರ್ಯನಿರ್ವಾಹಕ ಅಧಿಕಾರಿಗಳು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರು ಸದಸ್ಯರು, ತಾಲೂಕ ಯೋಜನಾಧಿಕಾರಿಗಳು, ಸಹಾಯಕ ನಿರ್ದೇಶಕರು,ತಾ.ಪಂ ಶಹಾಪೂರ, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಸ್ವ.ಭಾ.ಮಿ ಸಮಾಲೋಚಕರು, ನರೇಗಾ ಸಂಯೋಜಕರು, ಉಪಸ್ಥಿತರಿದ್ದು, ಆಶಾ- ಅಂಗನವಾಡಿ ಕಾರ್ಯಕರ್ತೆಯರು, ವಸತಿ ನೀಲಯದ ವಿಧ್ಯಾರ್ಥಿಗಳು, ಉPಐಈ ಅಧ್ಯಕ್ಷರು, ಸದಸ್ಯರು, ಗ್ರಾಮದ ಮಹಿಳೆಯರು,ಗ್ರಾ.ಪಂ.ಸಿಬ್ಬಂದಿಯವರು ಭಾಗವಹಿಸಿದ್ದರು.