ಗೋಡ್ಸೆ-ಗಾಂಧೀಜಿ ನಡುವೆ ಹೋರಾಟ-ರಾಹುಲ್

ನ್ಯೂಯಾರ್ಕ್,ಜೂ.೫- ಭಾರತದಲ್ಲಿ ಒಂದು ಬದಿಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಮತ್ತೊಂದು ಬದಿಯಲ್ಲಿ ನಾಥೂರಾಂ ಗೋಡ್ಸೆ” ಸಿದ್ಧಾಂತಗಳ ನಡುವೆ ಹೋರಾಟ ನಡೆಯುತ್ತಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಗಾಂಧೀಜಿ ಸಿದ್ಧಾಂತವನ್ನು ಕಾಂಗ್ರೆಸ್ ಪಕ್ಷ ಮತ್ತು ಗೋಡ್ಸೆ ಸಿದ್ಧಾಂತವನ್ನು ಬಿಜೆಪಿ ಮತ್ತು ಆರ್‌ಎಸ್‌ಎಸ್ ಪ್ರತಿನಿಧಿಸುತ್ತದೆ. ಈ ಕಾರಣಕ್ಕಾಗಿಯೇ ಹೋರಾಟ ನಡೆದಿದೆ. ಬಿಜೆಪಿಗಾಗಲಿ ಅಥವಾ ಆರ್‌ಎಸ್‌ಎಸ್‌ಗಾಗಲಿ ದೇಶದ ಭವಿಷ್ಯ ಬೇಕಾಗಿಲ್ಲ. ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಮತ್ತೊಬ್ಬರ ಮೇಲೆ ಆರೋಪ ಮಾಡುವುದು ಅವರ ಕಾಯಕ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಅಮೇರಿಕಾ ಪ್ರವಾಸದಲ್ಲಿರುವ ರಾಹುಲ್‌ಗಾಂಧಿ ಅವರು ಜಾವಿಟ್ಸ್ ಸೆಂಟರ್‌ನಲ್ಲಿ ಭಾರತೀಯ ಸದಸ್ಯರನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರಮೋದಿ ಮತ್ತು ಬಿಜೆಪಿಗೆ ದೇಶದ ಅಭಿವೃದ್ಧಿ ಬೇಕಾಗಿಲ್ಲ ಎಂದು ಟೀಕಿಸಿದ್ದಾರೆ.
ಬಿಜೆಪಿ ಮತ್ತು ಆರ್‌ಎಸ್‌ಎಸ್ ಭವಿಷ್ಯದ ಬಗ್ಗೆ ಯೋಚಿಸದೆ ಬರೀ ಭೂತಕಾಲದ ಬಗ್ಗೆ ಮಾತ್ರ ಮಾತನಾಡುತ್ತಾರೆ ಮತ್ತು ಅವರು ಯಾವಾಗಲೂ ಭೂತಕಾಲಕ್ಕೆ ಬೇರೆಯವರನ್ನು ದೂಷಿಸುವದೇ ಅವರ ಕಾಯಕ ಮಾಡಿಕೊಂಡಿದ್ದಾರೆ ಎಂದಿದ್ದಾರೆ.
ಬಿಜೆಪಿ, ಆರ್‌ಎಸ್‌ಎಸ್ ಜೊತೆಗೆ ಮಂತ್ರಿಗಳ ಮಾತುಗಳು,ಪ್ರಧಾನಿಯ ಮಾತುಗಳನ್ನು ಕೇಳುತ್ತೀರಿ, ಅವರು ಎಂದಿಗೂ ಭವಿಷ್ಯದ ಬಗ್ಗೆ ಮಾತನಾಡುವುದು ಎಂದಿಗೂ ಕಾಣುವುದಿಲ್ಲ, ಅವರು ಭೂತಕಾಲದ ಬಗ್ಗೆ ಮಾತ್ರ ಮಾತನಾಡುತ್ತಾರೆ, ”ಎಂದು ಅವರು ಆರೋಪಿಸಿದ್ದಾರೆ.
ಭಾರತೀಯರು ಅಮೇರಿಕಾದಲ್ಲಿ ಹೇಗೆ ಕೆಲಸ ಮಾಡಿದ್ದಾರೆ ಮತ್ತು ಅದಕ್ಕಾಗಿಯೇ ಭಾರತೀಯರು ಇಲ್ಲಿ ಯಶಸ್ವಿಯಾಗಿದ್ದಾರೆ. ಅದಕ್ಕಾಗಿ ನಿಮ್ಮನ್ನು ಗೌರವಿಸುತ್ತೇನೆ ಎಂದು ಹೇಳಿದರು.