ಗೋದುತಾಯಿ ಕಾಲೇಜಿನ ಕು.ನೈನಾ ಮಾನ್ಸಾಗೆ ರ್ಯಾಂಕ್

ಕಲಬುರಗಿ:ಫೆ.13: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ನಡೆಸಿದ 2022-23 ನೆ ಸಾಲಿನ ಅಂತಿಮ ವರ್ಷದ ಪರೀಕ್ಷೆಯಲ್ಲಿ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದ ಕಲಾ ವಿಭಾಗ ವಿದ್ಯಾರ್ಥಿನಿ ಕು.ನೈನಾ ಗುರುರಾಜ ಮಾನ್ಸಾ ಅವರು ವಿಶ್ವವಿದ್ಯಾಲಯಕ್ಕೆ 5ನೆ ರ್ಯಾಂಕ್ ಪಡೆದಿದ್ದಾರೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪೂಜ್ಯ ಡಾ.ಶರಣಬಸವಪ್ಪ ಅಪ್ಪ, ಚೇರಮನ್ ಪೂಜ್ಯ ಡಾ.ದಾಕ್ಷಾಯಣಿ ಎಸ್.ಅಪ್ಪ ಮತ್ತು ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ಶ್ಲಾಘಿಸಿ ಹಾರೈಸಿದ್ದಾರೆ.
ಮಹಾವಿದ್ಯಾಲಯದ ಪ್ರಾಚಾರ್ಯೆ ಶ್ರೀಮತಿ ಜಾನಕಿ ಹೊಸೂರ್, ಶರಣಬಸವೇಶ್ವರ ದೇವಸ್ಥಾನ ಆವರಣದ ಶಾಲಾ-ಕಾಲೇಜುಗಳ ನಿರ್ದೇಶಕಿ ಡಾ.ನೀಲಾಂಬಿಕಾ ಶೇರಿಕಾರ ಮತ್ತು ಮಹಾವಿದ್ಯಾಲಯದ ಶಿಕ್ಷಕರು ಮತ್ತು ಶಿಕ್ಷಕೇತರರು ಸಂತಸ ವ್ಯಕ್ತಪಡಿಸಿದ್ದಾರೆ.