
ಸಂಜೆವಾಣಿ ವಾರ್ತೆ
ಕಂಪ್ಲಿ, ಜು.28: ಇಲ್ಲಿಗೆ ಸಮೀಪದ ಗೋನಾಳ್ ಗ್ರಾಮದಲ್ಲಿ ಬುಧವಾರ ಪುನ: 6 ಜನಕ್ಕೆ ವಾಂತಿ-ಭೇದಿ ಪ್ರಕರಣ ಕಾಣಿಸಿಕೊಂಡಿದ್ದು, 6 ಜನಕ್ಕು ಚಿಕಿತ್ಸೆ ನೀಡಿದ್ದು, ಗುಣಮುಖರಾಗಿದ್ದಾರೆ.
ಗೋನಾಳ್ ಗ್ರಾಮದಲ್ಲಿ ಇಲ್ಲಿಯವರೆಗೆ ಒಟ್ಟು 39 ವಾಂತಿ-ಭೇದಿ ಪ್ರಕರಣಗಳು ಪತ್ತೆಯಾಗಿದ್ದು, ಇವರಲ್ಲಿ ಒಬ ಬಾಲಕಿ, ಮೃತಪಟ್ಟಿದ್ದು, ಮೂವರು ರೋಗಿಗಳು ವಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
ಡಿಎಚ್ಒ ಡಾ.ಜನಾರ್ದನ ಬುಧವಾರ ಗ್ರಾಮಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಮನೆ, ಮನೆಗೆ ತೆರಳಿ ಜನರಲ್ಲಿ ವಾಂತಿ-ಭೇದಿ ಪ್ರಕರಣದಿಂದ ಕಾಪಾಡಿಕೊಳ್ಳುವುದು ಹೇಗೆನ್ನುವ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಈ ವೇಳೆ ಪ್ರಭಾರಿ ತಾಲೂಕು ವೈದ್ಯಾಧಿಕಾರಿ ಡಾ.ರಾಧಿಕಾ, ಡಾ.ಅರುಣ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪಿ.ಬಸವರಾಜ್, ಆರೋಗ್ಯ ನಿರೀಕ್ಷಣಾಧಿಕಾರಿ ಪ್ರಭಾಕರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕೆ.ಶೋಭಾ, ಗ್ರಾಮ ಪಂಚಾಯಿತಿ ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.
27ಕಂಪ್ಲಿ03 ಕಂಪ್ಲಿ ತಾಲೂಕಿನ ಗೋನಾಳ್ ಗ್ರಾಮಕ್ಕೆ ಡಿಎಚ್ಒ ಡಾ.ಜನಾರ್ದನ ಭೇಟಿ ನೀಡಿ ಪರಿಶೀಲಿಸಿದರು.
Attachments area