ಗೋನೂರು ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಡಿಸಿ ಭೇಟಿ

ಚಿತ್ರದುರ್ಗ,ಏ.17; 
ಚಿತ್ರದುರ್ಗ ತಾಲ್ಲೂಕಿನ ಗೋನೂರು ಸಮೀಪದ ಹೋ.ಚಿ.ಬೋರಯ್ಯ ಬಡಾವಣೆಯ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಶುಕ್ರವಾರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
 ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿನ ನಿರಾಶ್ರಿತರ ಕೊಠಡಿಗಳು, ಅಡುಗೆ ಕೋಣೆ, ದಿನಸಿ ಕೊಠಡಿ ಸೇರಿದಂತೆ ಸುತ್ತಮುತ್ತಲಿನ ಸ್ವಚ್ಛತೆ ಹಾಗೂ ಊಟ ವಸತಿ ಸೇರಿದಂತೆ ಮೂಲಭೂತ ಸೌಕರ್ಯಗಳ ಪರಿಶೀಲನೆ ನಡೆಸಿ, ನಿರಾಶ್ರಿತರ ಯೋಗಕ್ಷೇಮ ವಿಚಾರಿಸಿದರು.  
ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಮಧ್ಯಾಹ್ನದ ಊಟ ಸವಿದ ಜಿಲ್ಲಾಧಿಕಾರಿಗಳು, ಕೇಂದ್ರದಲ್ಲಿನ ಸುಂದರ ವಾತಾವರಣ, ಸ್ವಚ್ಛತೆ ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.
 ಈ ಸಂದರ್ಭದಲ್ಲಿ ನಿರಾಶ್ರಿತರ ಪರಿಹಾರ ಕೇಂದ್ರದ ಅಧೀಕ್ಷಕ ಎಂ.ಮಹದೇವಯ್ಯ ಸೇರಿದಂತೆ ನಿರಾಶ್ರಿತರ ಪರಿಹಾರ ಕೇಂದ್ರದ ಸಿಬ್ಬಂದಿ ಹಾಜರಿದ್ದರು.
ಫೋಟೋ ವಿವರ: ಚಿತ್ರದುರ್ಗ ತಾಲ್ಲೂಕಿನ ಗೋನೂರು ಸಮೀಪದ ಹೋ.ಚಿ.ಬೋರಯ್ಯ ಬಡಾವಣೆಯ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಶುಕ್ರವಾರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.