ಗೋವಿಗಾಗಿ ಮೇವು ಅಭಿಯಾನ ಆರಂಭ

ಉಡುಪಿ, ನ.೯-ಅನಾಥ ಗೋವುಗಳ ಸಂರಕ್ಷಣೆ ಮಾಡುತ್ತಿರುವ ಗೋಶಾಲೆಗಳಿಗೆ ಮೇವನ್ನು ನೀಡಲು ಸಾಮಾಜಿಕ ಜಾಲತಾಣದಲ್ಲಿ ಗೋವಿಗಾಗಿ ಮೇವು ಅಭಿಯಾನ ಆರಂಭ ಗೊಂಡಿದ್ದು, ಕಾಮಧೇನು ಗೋಸೇವಾ ಸಮಿತಿ ಮಂದಾರ್ತಿಯ ವತಿಯಿಂದ ಉಡುಪಿಯ ಪೇಜಾವರ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಆಶೀರ್ವಾದದಲ್ಲಿ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ.
ಅಭಿಯಾನದ ವಿಸ್ತಾರ ರಾಜ್ಯದ ವಿವಿಧ ಜಿಲ್ಲೆಗಳಿಗೆ ಸಾಗಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಧಿಕೃತವಾಗಿ ಗೋವಿಗಾಗಿ ಮೇವು ಅಭಿಯಾನಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಸಚಿವ ಸಿ.ಟಿ ರವಿಯವರು ಅಧಿಕೃತವಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿ.ಟಿ. ರವಿಯವರು, ಸಾಮಾಜಿಕ ಜಾಲತಾಣದಲ್ಲಿ ಉಡುಪಿ ಜಿಲ್ಲೆಯಲ್ಲಿ ಆರಂಭಗೊಂಡ ಗೋವಿಗಾಗಿ ಮೇವು ಅಭಿಯಾನಕ್ಕೆ ಉಡುಪಿ ಜಿಲ್ಲೆಯಲ್ಲಿ ೩೦೦ಕ್ಕೂ ಹೆಚ್ಚು ಸಂಘಟನೆಗಳು ಭಾಗಿಯಾಗಿ ಯಶಸ್ವಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ
ಅಧಿಕೃತ ಆರಂಭಗೊಂಡಿದೆ. ಜಿಲ್ಲೆಯ ಎಲ್ಲಾ ಸಂಘಟನೆಗಳು ಭಾಗಿಯಾಗಲಿ, ಹಾಗೆಯೇ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಅಭಿಯಾನ ಆರಂಭವಾಗಲಿ ಎಂದರು.
ಗೋವಿಗಾಗಿ ಮೇವು ಅಭಿಯಾನ ಸಂಚಾಲಕ ಪೃಥ್ವೀರಾಜ್ ಶೆಟ್ಟಿ ಬಿಲ್ಲಾಡಿ, ಶೃಂಗೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಮಣಿಕಂಠನ್ ಕಂದಸ್ವಾಮಿ, ಗೋವಿಗಾಗಿ ಮೇವು ಚಿಕ್ಕಮಗಳೂರು ಜಿಲ್ಲಾ ಪ್ರಮುಖ್ ಅರುಣ್ ಹರೂರು, ಶಂಕರ ಗೋಸೇವಾ ಟ್ರಸ್ಟ್‌ನ ಅಧ್ಯಕ್ಷ ಲಕ್ಷ್ಮೀನಾರಾಯಣ, ಗೋವಿಗಾಗಿ ಮೇವು ಚಿಕ್ಕಮಗಳೂರು ಜಿಲ್ಲಾ ಕಾರ್ಯದರ್ಶಿ ಅವಿನಾಶ್ ಕುಂಚೆಬೈಲು, ಗೋವಿಗಾಗಿ ಮೇವು ಉಡುಪಿ ಜಿಲ್ಲಾ ನಾಗೇಂದ್ರ ಪುತ್ರನ್ ಕೋಟ, ಅನಿಲ್ ಹರೂರು, ಮಹೇಶ್, ವಿನೋದ್ ರಾಜ್ ಉಪಸ್ಥಿತರಿದ್ದರು.