ವಿಜಯಪುರ:ಜೂ.27: ನಗರ ಮತ್ತು ಗ್ರಾಮಗಳ ಸಂತೆ, ಮಾರುಕಟ್ಟೆಯಲ್ಲಿ ಮಾರಾಟಕ್ಕಾಗಿ ಕರೆತರುವ ಜಾನುವಾರುಗಳ ವ್ಯಾಪಾರಸ್ಥರಿಗೆ ಗೋಹತ್ಯೆ ನಿಷೇಧ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಜನರಲ್ಲಿ ಬಕ್ರೀದ್ ಹಬ್ಬದ ನಿಮಿತ್ಯ ಕೈಗೊಂಡ ಗೋಹತ್ಯೆ ಕಾಯ್ದೆ ಜಾರಿ ಉಲ್ಲಂಘನೆಯಾಗದಂತೆ ಹಾಗೂ ಜಿಲ್ಲೆಯಲ್ಲಿ ಗೋಹತ್ಯೆಗಳನ್ನು ತಡೆಗಟ್ಟುವಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಮಹದೇವ ಮುರಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಜೂ. 29 ರಂದು ನಡೆಯುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅನಧಿಕೃತ ವಧೆಯನ್ನು ತಡೆಗಟ್ಟಲು ತೆಗೆದುಕೊಳ್ಳುವ ಕ್ರಮಗಳ ಕುರಿತು ಮುಂಜಾಗ್ರತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ( ಜಾನುವಾರುಗಳ ಸಾಗಾಣಿಕೆ) ನಿಯಮಗಳು, 2021ರ ಅಧಿನಿಯಮದ ಬಗ್ಗೆ ಜನರಲ್ಲಿ ಅರಿವು ಕಾರ್ಯಕ್ರಮ ಹಮ್ಮಿಕೊಂಡು, ಜೂ. 29 ರಂದು ನಡೆಯುವ ಬಕ್ರೀದ್ ಹಬ್ಬದಂದು ಜಾನುವಾರುಗಳ ಅಕ್ರಮ ಸಾಗಾಣಿಕೆ ನಡೆಯದಂತೆ ಎಚ್ಚರಿಕೆ ವಹಿಸುವಂತೆ ಅವರು ಸೂಚಿಸಿದರು.
ಅಧೀಕೃತ ಸಾಗಾಣಿಕೆಗೆ ಅವಕಾಶವಿದ್ದು, ಅನಧೀಕೃತ ಸಾಗಾಣಿಕೆಗೆ ನಿಬರ್ಂಧ ಹೇರಲಾದ ಹಿನ್ನಲೆಯಲ್ಲಿ ಜೂ. 28, 29 ರಂದು ಎರಡು ದಿನಗಳ ಕಾಲ ನಗರ ಹಾಗೂ ಗ್ರಾಮೀಣ ಭಾಗದ ಪ್ರದೇಶಗಳಲ್ಲಿ ಮತ್ತು ಗಡಿಭಾಗದಲ್ಲಿ ಯಾವುದೇ ರೀತಿಯ ಗೋಹತ್ಯೆ, ಜಾನುವಾರುಗಳ ಸಾಗಾಣಿಕೆ ಮಾಡುವುದು, ಪ್ರಾಣಿವಧೆಯಂತಹ ಅನಗತ್ಯ ಕ್ರಮಗಳು ಜರುಗದಂತೆ ನೋಡಿಕೊಳ್ಳಬೇಕು. ಮಹಾನಗರ ಪಾಲಿಕೆ ಹಾಗೂ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಪೆÇಲೀಸ್ ಇಲಾಖೆ ಸಿಬ್ಬಂದಿಗಳು ಸೇರಿದಂತೆ ಹಲವು ಅಧಿಕಾರಿಗಳ ತಂಡವನ್ನು ರಚಿಸಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ವಹಿವಂತೆ ಅವರು ಸೂಚಿಸಿದರು.
ಮಹಾನಗರಪಾಲಿಕೆ ಆಯುಕ್ತರ ನೇತೃತ್ವದಲ್ಲಿ ಗೋಹತ್ಯೆ ನಿಷೇಧ ತಡೆಗೆ ಸಹಕಾರಿಯಾಗುವಂತೆ ಹಲವು ತಂಡಗಳನ್ನು ರಚಿಸಿ ಅದರ ಮೇಲ್ವಿಚಾರಣೆ ಮಾಡವಂತೆ ಹಾಗೂ ವಿವಿಧ ತಾಲೂಕು, ಪಟ್ಟಣ ಪಂಚಾಯತ, ಗ್ರಾಮ ಪಂಚಾಯತ್ ಗಳಿಗೆ ಸಂಬಂಧಪಟ್ಟ ಅಧಿಕಾರಿಗಳ ನೇತೃತ್ವದಲ್ಲಿ ಕೂಡ ತಂಡ ರಚಿಸಲು ತಿಳಿಸಿದರು.
ಅನಧಿಕೃತವಾಗಿ ಜಾನುವಾರುಗಳ ಸಾಗಾಣಿಕೆ ವಾಹನಗಳ ನೊಂದಣಿಯನ್ನು ರದ್ದುಪಡಿಸುವ ಬಗ್ಗೆ ಈಗಾಗಲೇ ಕ್ರಮಕೈಗೊಳ್ಳಲು ನಿರ್ದೇಶನ ನೀಡಲಾಗಿದೆ ಅದರಂತೆ ಅನಧಿಕೃತವಾಗಿ ಕಂಡು ಬಂದ ಜಾನುವಾರುಗಳನ್ನು ಮಹಾನಗರಪಾಲಿಕೆಯವರು ವಶಕ್ಕೆ ಪಡೆದು ಜಿಲ್ಲೆಯಲ್ಲಿರುವ ಗೋಶಾಲೆಗಳಿಗೆ ನೀಡಬೇಕು. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ( ಜಾನುವಾರುಗಳ ಸಾಗಾಣಿಕೆ ) ನಿಯಮಗಳು 2021ರ ನಿಯಮದನ್ವಯ ಜಾನುವಾರು ಮಾಲೀಕರು, ಸಾರ್ವಜನಿಕರು ಹಾಗೂ ಸರಕುವಾಹನ ಮಾಲೀಕರು / ಚಾಲಕರು ಜಾನುವಾರುಗಳನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ವಾಹನದಲ್ಲಿ ಸಾಗಾಣಿಕೆ ಮಾಡಲು ತಿತಿತಿ.ಚಿಟಿimಚಿಟಣಡಿಚಿಟಿs.ಞಚಿಡಿಚಿhvs.iಟಿ ವೆಬ್ ಸೈಟ್ ನಲ್ಲಿ ಇ- ಪರವಾನಗಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.
ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಕಾಯ್ದೆ ಉಲ್ಲಂಘನೆಯಾಗದಂತೆ ಕ್ರಮ ವಹಿಸುವುದು ಅತ್ಯವಶ್ಯಕವಾಗಿದ್ದು, ಸರ್ಕಾರದ ಅಧಿಸೂಚನೆಯಂತೆ ಜಿಲ್ಲಾಮಟ್ಟದ ಎಲ್ಲ ಇಲಾಖೆಗಳ ಮಾರ್ಗದರ್ಶನದಲ್ಲಿ ಗೋಹತ್ಯೆ ಮತ್ತು ಒಂಟಿಗಳ ಮೇಲಾಗುವ ಹಲ್ಲೆಯನ್ನು ತಡೆಗಟ್ಟಲು ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾ ಪೆÇೀಲಿಸ್ ವರಿಷ್ಟಾಧಿಕಾರಿ ಶಂಕರ ಮಾರಿಹಾಳ ಅವರು ಮಾತನಾಡಿ, ಜಾನುವಾರು ಮಾಲೀಕರಿಗೆ ಮನವೊಲಿಸಿ, ಜಾನುವಾರುಗಳಿಗೆ ಓಲೆ ಹಾಕುವ ಪ್ರಕ್ರಿಯೆ, ಅಕ್ರಮ ವಧೆ ಹಾಗೂ ಸಾಗಾಣಿಕೆ ತಡೆಗಟ್ಟಲು ಮತ್ತು ಬಕ್ರೀದ್ ಹಬ್ಬದ ನಿಮಿತ್ಯ ಪೆÇೀಲಿಸ್ ಇಲಾಖೆಯಿಂದ ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗದ ವಿವಿಧ ಕಡೆಗಳಲ್ಲಿ ಚೆಕ್ ಪೆÇೀಸ್ಟ್ ಗಳನ್ನು ಸ್ಥಾಪಿಸಿ, ಸಿಬ್ಬಂದಿಗಳನ್ನು ನೇಮಿಸಲಾಗಿದೆ. ನಗರ ಅಥವಾ ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ರೀತಿಯ ಅನಧೀಕೃತ ಜಾನುವಾರುಗಳ ಅಕ್ರಮ ಸಾಗಾಣಿಕೆ ಹಾಗೂ ವಧೆಗಳ ಬಗ್ಗೆ ಮಾಹಿತಿ ಕಂಡು ಬಂದಲ್ಲಿ ಸಾರ್ವಜನಿಕರು ಜಿಲ್ಲಾಡಳಿತ ಅಥವಾ ಹತ್ತಿರದ ಪೆÇೀಲಿಸ್ ಠಾಣೆಗಳಲ್ಲಿ ದೂರುಗಳನ್ನು ದಾಖಲಿಸಬಹುದು ಅಥವಾ ಸಹಾಯವಾಣಿ ಸಂಖ್ಯೆ-112 ಗೆ ಸಂಪರ್ಕಿಸಬಹುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯಿಂದ ಹೊರತಂದಿರುವ ಜಾನುವಾರು ಸಾಗಾಣಿಕೆಗಾಗಿ ಇ-ಪರವಾನಗಿ ಪೆÇೀಸ್ಟರ್ ಅಪರ ಜಿಲ್ಲಾಧಿಕಾರಿ ಅವರು ಬಿಡುಗಡೆಗೊಳಿಸಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರು ವಿಜಯಕುಮಾರ ಮೆಕ್ಕಳಕಿ, ಪಶುಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆ ಸಹಾಯಕ ನಿರ್ದೇಶಕರು ಡಾ. ಎಮ್.ಸಿ. ಅರಕೇರಿ, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕರು ಡಾ. ಅಶೋಕ ಗೋಣಸಗಿ, ಪಾಲಿಕ್ಲಿನಿಕ್ ಉಪನಿರ್ದೇಶಕರು ಶಿವಕುಮಾರ ಹೊಳೆಪ್ಪಗೋಳ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.