ಗೋಹತ್ಯೆ, ಲವ್ ಜಿಹಾದ್ ಬಿಜೆಪಿಯ ಹತಾಶ ಯತ್ನ ಸಿದ್ದು ವಾಗ್ದಾಳಿ


ಬೆಂಗಳೂರು, ನ 15- ಆಡಳಿತ ನಡೆಸುವವರಿಗೆ ಸಂವಿಧಾನ‌‌ ಗೊತ್ತಿರಬೇಕೆ ಹೊರತು ಆರ್ ಎಸ್ ಎಸ್ ಅಲ್ಲ . ಆದರೆ ಬಿಜೆಪಿ ತನ್ನ ಆಡಳಿತ ವೈಫಲ್ಯಗಳನ್ನು ಮುಚ್ಚಿಕೊಳ್ಳುವ ನಿಟ್ಟಿನಲ್ಲಿ ರಾಜ್ಯದ ಜನತೆಯ ಗಮನವನ್ನು ಬೇರೆಡ ಸೆಳೆಯಲು ಗೋಹತ್ಯೆ, ಲವ್ ಜಿಹಾದ್ ನಿಷೇಧ ಮಾಡಲು ಹೊರಟಿದೆ ಎಂದು ವಿಧಾನಸಭೆಯ ವಿರೋಧ ಪಕ್ಚದ ನಾಯಕ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ತನ್ನ ವೈಫಲ್ಯಗಳನ್ನು ಮರೆ ಮಾಚಲು ಬಿಜೆಪಿ ನಾಯಕರು ಹತಾಶ ಪ್ರಯತ್ನ ನಡೆಸುತ್ರಿದಾರೆ ಎಂ.ದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಲವ್ ಜಿಹಾದ್ ಎಂಬ ಪದ ವ್ಯಾಪಕ ಚರ್ಚೆಗೆ ಕಾರಣವಾಗಿದೆ‌. ಬಿಜೆಪಿ ಮುಖಂಡ ಸಿ.ಟಿ.ರವಿ ಸೇರಿದಂತೆ ಸಚಿವರು ಗೋಹತ್ಯೆ ಮತ್ತು ಲವ್ ಜಿಹಾದ್ ನಿಷೇಧ ಮಾಡುವುದಾಗಿ ಹೇಳಿಕೆ ನೀಡುತ್ತಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮದುವೆಗೆ ಜಾತಿ-ಧರ್ಮಗಳ ನಿರ್ಬಂಧ ಕಾನೂನಿನಲ್ಲಿ ಇಲ್ಲ. ದೇಶದ ಯಾವ ಕಾನೂನು ಕೂಡಾ ಲವ್ ಜಿಹಾದ್ ಎಂದರೆ ಏನು ಎಂದು ವ್ಯಾಖ್ಯಾನಿಸಿಲ್ಲ. ಈ ಬಗ್ಗೆ ಕೇಂದ್ರ ಗೃಹಸಚಿವರೇ ಸಂಸತ್ ನಲ್ಲಿ ಹೇಳಿಕೆ ನೀಡಿದ್ದಾರೆ. ಸಚಿವ ಸಿಟಿ ರವಿ ಗೃಹಸಚಿವರನ್ನು ಕೇಳಿಕೊಂಡು ಬಂದು ಲವ್ ಜಿಹಾದ್ ಬಗ್ಗೆ ಮಾತನಾಡಲಿ ಎಂದು ತಿರುಗೇಟು ನೀಡಿದ್ದಾರೆ.