ಗೋ ಹತ್ಯೆ ಖಂಡಿಸಿ ಪ್ರತಿಭಟನೆ

ಬಾದಾಮಿ,ಜೂ30: ಪಟ್ಟಣದ ಹೊರವಲಯದ ಹೊಲದಲ್ಲಿ ನಿನ್ನೆ ಗೋಹತ್ಯೆ ನಡೆದಿದೆ ಎಂಬ ಸುದ್ದಿ ಹರಡುತ್ತಿದ್ದಂತೆ ಸ್ಥಳಕ್ಕೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಧಾವಿಸಿ ತೀವ್ರವಾಗಿ ಪ್ರತಿಭಟನೆ ನಡೆಸಿದರು.
ಗೋ ಹತ್ಯೆ ನಡೆಸಿರುವವರನ್ನು ಬಂಧಿಸುವಂತೆ ಅವರು ಆಗ್ರಹಿಸಿದರು. ಈ ಸಂದರ್ಭದಲ್ಲಿ ಪಟ್ಟಣದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಯಿತು.
ನಂತರ ಪೊಲೀಸರ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ತಿಳಿಯಾಯಿತು.