
ಔರಾದ :ಎ.1: ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪೂರ ಅವರು ಬಸವಕಲ್ಯಾಣ ಉಪಚುನಾವಣೆಯ ಪ್ರಚಾರ ಸಭೆಯಲ್ಲಿ ಬಹಿರಂಗವಾಗಿ ಗೋಹತ್ಯೆ ಕಾಯ್ದೆ ವಿರೋಧಿಸಿ ಪ್ರಚೋದನಾಕಾರಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ಔರಾದ ತಾಲೂಕು ಶ್ರೀ ರಾಮ ಸೇನೆ ಆಕ್ರೋಶ ವ್ಯಕ್ತಪಡಿಸಿದೆ.
ಇತ್ತಿಚಿಗಷ್ಟೆ ಕೆಲ ದಿನಗಳ ಹಿಂದೆ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಿದೆ ಆದರೆ ಬೀದರ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪೂರ ಅವರು ಮತ ರಾಜಕಾರಕ್ಕಾಗಿ ಕಾಯ್ದೆ ವಿರೋಧಿಸಿ ಮಾತನಾಡಿರುವುದು ಸಂವಿಧಾನ ಮತ್ತು ಪ್ರಜಾತಂತ್ರಕ್ಕೆ ಮಾಡಿರುವ ಅವಮಾನ. ಅವರ ಈ ಹೇಳಿಕೆ ಸಮಸ್ತ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದೆ.
ಶಾಸಕರ ಈ ಹೇಳಿಕೆಯಿಂದ ಕೋಮು ಗಲಭೆಗೆ ಪ್ರಚೋದನೆ ನೀಡುವುದಾಗಿದೆ, ಹಿಂದೂಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಹೇಳಿಕೆ ನೀಡಿರುವ ಮಾನ್ಯ ಶಾಸಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಕೂಡಲೇ ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ಔರಾದ ಶ್ರೀ ರಾಮ ಸೇನೆ ಕಾರ್ಯಕರ್ತರು ಮಾನ್ಯ ತಹಸೀಲ್ದಾರ ಮುಖಾಂತರ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಗಮೇಶ ದ್ಯಾಡೆ, ಬಸವರಾಜ ಚೌಕಂಪಳ್ಳೆ, ಮಹೇಶ್ ಪಾಟೀಲ್, ವಿಶಾಲ ಕೋಳಿ, ರಲವಿ, ರಜನಿ ದಾಮಾ, ಗಣೇಶ್, ಪ್ರಭು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.