ಗೌತಮ ಬುದ್ಧರ ತತ್ವಾದರ್ಶ ಪಾಲಿಸಿದ್ದಲ್ಲಿ ಬದುಕು ಸಾರ್ಥಕ : ರವೀಂದ್ರ ಸ್ವಾಮಿ

ಔರಾದ :ಮಾ.14: ಗೌತಮ ಬುದ್ಧರ ಮಾರ್ಗದರ್ಶನದಲ್ಲಿ ನಾವೆಲ್ಲ ಸಾಗಿದರೆ ಬದುಕು ಬಂಗಾರವಾಗುತ್ತದೆ ಬುದ್ಧನ ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಬದುಕು ಸಾರ್ಥಕ ಎಂದು ಏಕತಾ ಫೌಂಡೇಶನ್ ಅಧ್ಯಕ್ಷ ರವೀಂದ್ರ ಸ್ವಾಮಿ ನುಡಿದರು.

ತಾಲೂಕಿನ ಹೆಡಗಾಪೂರ ಗ್ರಾಮದಲ್ಲಿ ಭಗವಾನ ಗೌತಮ ಬುದ್ಧರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಗೌತಮ ಬುದ್ಧರು ಇಡೀ ವಿಶ್ವಕ್ಕೆ ನೀಡಿದ ಕೊಡುಗೆ ಅಪಾರ, ಬೌದ್ಧ ಧರ್ಮದ ಮೂಲಕ ವಿಶ್ವಕ್ಕೆ ಜ್ಞಾನ, ಮಾನವೀಯತೆ ಹಾಗೂ ಶಾಂತಿಯ ಸಂದೇಶ ನೀಡಿ ಏಷ್ಯಾದ ಬೆಳಕು ಎಂದೇ ಪ್ರಸಿದ್ಧರಾದವರು ಭಗವಾನ್ ಗೌತಮ ಬುದ್ಧ. ಗೌತಮ ಬುದ್ಧ ಬೌದ್ಧ ಧರ್ಮದವರಿಗೆ ಮಾತ್ರ ಸೀಮಿತವಾಗಿಲ್ಲ ಅವರು ವಿಶ್ವಮಾನವರು ಅವರ ಸಂದೇಶಗಳನ್ನು ನಾವು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ತಾಲ್ಲುಕಿನಲ್ಲಿ ಅನೇಕ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಈ ಬಾರಿ ಔರಾದ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಛಿಸಿದ್ದು ಎಲ್ಲರೂ ಆಶೀರ್ವದಿಸಿ ಸೇವೆ ಮಾಡುವ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯವನ್ನು ‘ಭಂತೆ ಭದಂತ ಧಮ್ಮನಾಗ’ರವರು ವಹಿಸಿದರು. ಹೆಡಗಾಪೂರ ಗ್ರಾ.ಪಂ ಅಧ್ಯಕ್ಷೆ ಸರಸ್ವತಿ ಅಪ್ಪಾರಾವ ಪಾಟೀಲ, ಅಧ್ಯಕ್ಷತೆಯನ್ನು ಡಾ.ಟಿ.ಆರ್.ದೊಡ್ಡೆ ಅಧ್ಯಕ್ಷತೆ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಪೆÇ್ರ.ವಿಠಲದಾಸ ಪ್ಯಾಗೆ, ಮನ್ಮಥ ಡೋಳೆ, ದಾದಾರಾವ ಖರತ, ದತ್ತು ಡೊಂಗರೆ, ರಾಹುಲ ಕಾಂಬಳೆ ಸೇರಿದಂತೆ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.