ಗ್ಯಾಂಗ್ ವಾರ್ ನಾಲ್ವರು ಸಾವು

ನವದೆಹಲಿ.ಸೆ೨೪: ದೆಹಲಿ ರೋಹಿಣಿ ಕೋರ್ಟ್ ಆವರಣದಲ್ಲಿ ಗುಂಡಿನ ದಾಳಿ ನಡೆದಿದ್ದು, ಶೂಟೌಟ್ ನಲ್ಲಿ ನಾಲ್ವರು ಮೃತಪಟ್ಟಿದ್ದು, ೬ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಗ್ಯಾಂಗ್ ಸ್ಟರ್ ಜಿತೇಂದ್ರ ಗೋಗಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, ಇತರೆ ೬ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದ್ದು, ಇಬ್ಬರು ಶೂಟರ್ ಗಳನ್ನು ಪೊಲೀಸರು ಹೊಡೆದುರುಳಿಸಲಾಗಿದ್ದು, ಒಟ್ಟು ಶೂಟೌಟ್ ನಲ್ಲಿ ನಾಲ್ವರು ಮೃತಪಟ್ಟಿದ್ದಾರೆ.