
ತ್ರಿವಿಕ್ರಮ್ ಚಿತ್ರದ ಮೂಲಕ ಚಿತ್ರರಂಗಕ್ಕೆ ಪರಿಚಯವಾದ ಕ್ರೇಜಿಸ್ಟಾರ್ ರವಿಚಂದನ್ ಎರಡನೇ ಪುತ್ರ ವಿಕ್ರಮ್ ಇದೀಗ ಗ್ಯಾಂಗ್ ಸ್ಟರ್ ಅವತಾರದಲ್ಲಿ ಕಾಣಸಿಕೊಳ್ಳಲು ಸಿದ್ದರಾಗಿದ್ದಾರೆ. ಅದುವೇ ” ಮುಧೋಳ್ ” ಚಿತ್ರದ ಮೂಲಕ.
ಪಕ್ಕದಲ್ಲಿ ಮುಧೋಳ್ ನಾಯಿ. ಅದ ಬಾಯಲ್ಲಿ ಚಾಕು ಇದ್ದರೆ ವಿಕ್ರಮ್ ಬಾಯಲ್ಲಿ ಮೂಳೆ ಕೈಯಲ್ಲಿ ದೊಡ್ಡದಾದ ಕತ್ತಿ ಹಿಡಿದು ಭೇಟೆ ಸಿದ್ದರಾದಂತೆ ಕೂತಿರುವ ಪೋಸ್ಟರ್ ಗಮನ ಸೆಳೆದಿದೆ.
ಅಭಿಮಾನಿಗಳ ಸಮ್ಮುಖದಲ್ಲಿ ಚಿತ್ರದ ಶೀರ್ಷಿಕೆ ಅನಾವರಣ ಮಾಡಲಾಯಿತು. ಟೈಟಲ್ ಟೀಸರ್ ಮೂಲಕ ಎಂಟ್ರಿ ಕೊಟ್ಟ ವಿಕ್ರಮ್ ರವಿಚಂದ್ರನ್ ಕಂಪ್ಲೀಟ್ ಗ್ಯಾಂಗ್ ಸ್ಟಾರ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಅಪ್ಪ ರವಿಚಂದ್ರನ್ ಮುದೋಳ್ ಎನ್ನುವ ಶೀರ್ಷಿಕೆ ನೀಡಿದ್ದಾರೆ.
ಮುಧೋಳ್ ಬಗ್ಗೆ ಮಾಹಿತಿ ಹಂಚಿಕೊಂಡ ವಿಕ್ರಮ್ ರವಿಚಂದ್ರನ್, ತ್ರಿವಿಕ್ರಮ ರಿಲೀಸ್ ಆಗಿದ್ದು ಮೊದಲ ಚಿತ್ರ ಬಿಡುಗಡೆ ಆದ ನಂತರ ಎರಡನೇ ಚಿತ್ರ ಯಾವುದು ಎನ್ನುವ ಕುತೂಹಲವಿತ್ತು. ವಿಕೆಆರ್ ಅಂದರೆ ವಿಕ್ರಮ್ ರವಿಚಂದ್ರನ್ ಅನ್ನುವುದು ತುಂಬಾ ಜನಕ್ಕೆ ಗೊತ್ತಿದೆ. ವಿಕೆಆರ್ ಕೆ ಬ್ರ್ಯಾಂಡ್ ಶುರು ಮಾಡೋಣಾ ಅಂತಾ. ವಿಕೆಆರ್ ವಿಕ್ರಮ್ ರವಿಚಂದ್ರನ್ ಬರುತ್ತದೆ. ವೀರಸ್ವಾಮಿ ರವಿಚಂದ್ರನ್ ಬರುತ್ತೇ. ಪ್ರಯತ್ನ ನಿರಂತರ. ಪ್ರಯತ್ನ ಮಾಡಿ ಜೀವನದಲ್ಲಿ ಗೆಲುವುದು ಮುಖ್ಯವಲ್ಲ. ಜೀವನವನ್ನೇ ಗೆಲ್ಲಬಹುದು. ಆ ರೀತಿ ಒಂದು ತಂಡ ನಿಮ್ಮ ಮುಂದೆ. ನನ್ನ ಎರಡನೇ ಹೆಜ್ಜೆ ಪ್ರೀತಿ ಇರಲಿ ಎಂದು ಕೇಳಿಕೊಂಡರು.
ನಿರ್ದೇಶಕ ಕಾರ್ತಿಕ್ ರಾಜನ್ ಮಾತನಾಡಿ, ಮುಧೋಳ್ ಗಾಗಿ ತುಂಬಾ ಕಡೆ ಹುಡುಗಾಡಿದೆವು.. ತ್ಯಾಗರಾಜ್ ಎಂಬುವವರು ಆ ನಾಯಿಗೆ ತರಬೇತಿ ನೀಡಿದ್ದಾರೆಟೈಟಲ್ ಟೀಸರ್ ನಲ್ಲಿ ಶ್ವಾನ ಚಾಕು ಕಚ್ಚಿಕೊಂಡು ಬರುವ ದೃಶ್ಯಕ್ಕಾಗಿ 23 ಟೇಕ್ ತೆಗೆದುಕೊಂಡಿದ್ದೇವೆ ಎಂದರು.
ಸಂಭಾಷಣೆಗಾರ ಮಾಸ್ತಿ ಮಾತನಾಡಿ, ಈಶ್ವರಿ ಕಂಬೈನ್ಸ್ ಅನ್ನೋದು ಲೆಗೆಸಿ. ಹೀರೋಯಿನ್ಸ್ ಗಳು ರವಿಚಂದ್ರನ್ ಸರ್ ಜೊತೆ ಕೆಲಸ ಮಾಡ್ಬೇಕು ಎಂದುಕೊಳ್ತಿದ್ರು. ಅದೇ ರೀತಿ ರೈಟರ್ಸ್ ಆ ಸಂಸ್ಥೆ ಜೊತೆ ಕೆಲಸ ಮಾಡಬೇಕು ಎಂದುಕೊಳ್ತಿದ್ರು. ಈಶ್ವರಿ ಕಂಬೈನ್ಸ್ ಅನ್ನೋದು ಪರಂಪರೆ. ಆ ಸಂಸ್ಥೆಯ ಜೊತೆ ವಿಕ್ರಮ್ ಸರ್ ಜೊತೆ ಕೆಲಸ ಮಾಡುತ್ತಿರುವುದು ಖುಷಿ ಎಂದು ಹೇಳಿದರು.
ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್ ಮುಧೋಳ್ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಹೆಜ್ಜೆ. ಎಸ್.ತಮನ್ ಜೊತೆ ಕೆಲಸ ಮಾಡಿ ಅನುಭವ ಇರುವ ಯುವರಾಜ್ ಚಂದ್ರನ್ ಚಿತ್ರಕ್ಕೆ ಸಂಗೀತ ನಿರ್ದೇಶನ ನೀಡುತ್ತಿದ್ದಾರೆ.
ಮಾಸ್ತಿ ಸಂಭಾಷಣೆ, ಸಂದೀಪ್ ವಲ್ಲೂರಿ ಛಾಯಾಗ್ರಹಣ, ಡಾ.ಕೆ.ರವಿವರ್ಮಾ ಆಕ್ಷನ್ ಚಿತ್ರಕ್ಕಿದೆ. ರಕ್ಷಾ ವಿಜಯಕುಮಾರ್ ಹಾಗೂ ಸಿಲ್ಜು ಕಣ್ಣನ್ ನಿರ್ಮಾಣ ಮಾಡ್ತಿರುವ ಮಧೋಳ್ ಚಿತ್ರದಲ್ಲಿ ಲವ್ ಮಾಕ್ಟೇಲ್ ಖ್ಯಾತಿ ಅಭಿಲಾಶ್, ರಘು ಮ್ಯೂಟಂಟ್ ಸೇರಿದಂತೆ ಹಲವರು ನಟಿಸುತ್ತಿದ್ದಾರೆ.
30 ದಿನದ ಚಿತ್ರೀಕರಣ ಪೂರ್ಣ
ಮುಧೋಳ್ ಚಿತ್ರಕ್ಕಾಗಿ ಈಗಾಗಲೇ 30 ದಿನ ಚಿತ್ರೀಕರಣ ಪೂರ್ಣ ಮಾಡಿರುವ ಚಿತ್ರತಂಡ ಮತ್ತಷ್ಟು ಕಲಾವಿದರ ಬಗ್ಗೆ ಶೀರ್ಘದಲ್ಲಿಯೇ ಮಾಹಿತಿ ನೀಡಲಿದೆ. ಚಿತ್ರದಲ್ಲಿ ವಿಕ್ರಮ್‌ರವಿಚಂದ್ರನ್ ಗ್ಯಾಂಗ್ ಸ್ಟರ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.