
ರಾಯಚೂರು, ಆ.೦೮- ಕಾಂಗ್ರೆಸ್ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಎಸ್‌ಸಿಪಿ, ಟಿಎಸ್‌ಪಿ ಅನುದಾನ ಬಳಕೆ ಮಾಡದಂತೆ ಮೂಲ ನಿವಾಸಿ ಅಂಬೇಡ್ಕರ್ ಸೇನೆ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಚುನಾವಣಾಪೂರ್ವ ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ರಾಜ್ಯ ಜನತೆಗೆ ಭರವಸೆ ನೀಡಿತ್ತು. ಆದರೆ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಎಸ್‌ಸಿಪಿ, ಟಿಎಸ್‌ಪಿ ಅನುದಾನ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸಮುದಾಯದ ಅಭಿವೃದ್ಧಿ ಏಳಿಗೆಗೆ ಮೀಸಲಿಟ್ಟ ಅನುದಾನವನ್ನು ಬಳಕೆಗೆ ಮುಂದುದರೆ ಆರ್ಥಿಕವಾಗಿ ಹಿಂದುಳಿದ ಈ ಸಮುದಾಯದಕ್ಕೆ ಅನ್ಯಾಯ ಮಾಡಿದಂತ ಆಗುತ್ತದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆಗಳಿಗೆ ಅನುದಾನ ಬಳಕೆ ಮಾಡಿಕೊಂಡರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಎಂ. ಭರತ್, ಬಸವರಾಜ್ ತಳವಾರ, ಹನುಮೇಶ, ಶಿವಶಂಕರ, ಜಂಬಣ್ಣ ಮಂಜುಳಾ ಸೇರಿದಂತೆ ಉಪಸ್ಥಿತರಿದ್ದರು.