ಬಿಎಸ್‌ವೈ ಗುಡುಗು
ದಾವಣಗೆರೆ.ಜೂ.೨೨; ಕಾಂಗ್ರೆಸ್ ಸರ್ಕಾರಕ್ಕೆ ಐದು ಯೋಜನೆ ಅನುಷ್ಠಾನ ಮಾಡಲು ಆಗದೇ ಇದ್ದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.ನಗರದ ಅಭಿನವ ರೇಣುಕಾಮಂದಿರದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಪಕ್ಷದ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಗೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಜನರನ್ನು ಮರಳು ಮಾಡಲು ಕಾಂಗ್ರೆಸ್ ಮುಖಂಡರು ದಿನಕ್ಕೊಂದು ನಾಟಕ ವಾಡುತ್ತಿದ್ದಾರೆ. ಅನ್ನಭಾಗ್ಯಕ್ಕಾಗಿ ಅಕ್ಕಿ ನೀಡುವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೇಳಿ ಭರವಸೆ ಕೊಟ್ಟಿದ್ದರಾ ಎಂದು ಪ್ರಶ್ನಿಸಿದ ಅವರು ಚುನಾವಣೆಯಲ್ಲಿ ಗೆಲ್ಲಬೇಕು ಎಂದು ಅವರೇ ಭರವಸೆ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರ ಈಗಾಲೇ ೫ ಕೆಜಿ ಅಕ್ಕಿ ಕೊಡ್ತಿದೆ. ಸಿಎಂ ಸಿದ್ದರಾಮಯ್ಯ ಭರವಸೆ ಕೊಟ್ಟಂತೆ ೧೦ ಕೆಜಿ ಅಕ್ಕಿ ಕೊಡಬೇಕು.ಕೊಡಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಹರಿಹಾಯ್ದರು.ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಮಾತನಾಡಿ ಬಿಜೆಪಿ ಪಕ್ಷ ಕಟ್ಟಿ ಬೆಳೆಸಿ ಬಿಜೆಪಿಯನ್ನು ರೈತರಪರ ಬಡವರ ಪರ ಬೆಳೆಸಿದವರು ಮಾಜಿ ಸಿಎಂ ಯಡಿಯೂರಪ್ಪ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಭರವಸೆ ಈಡೇರಿಸದಿದ್ದರೆ ವಿಧಾನಸಭೆ ಮುಂದೆ ಧರಣಿ ನಡೆಸುವುದಾಗಿ ಬಿಎಸ್‌ವೈ ಹೇಳಿದ್ದಾರೆ. ಅದಕ್ಕಾಗಿ ರಾಜ್ಯದಲ್ಲಿ ಏಳು ತಂಡಗಳು ಪ್ರವಾಸ ಕೈಗೊಂಡಿದೆ. ರಾಜ್ಯ ಸರ್ಕಾರದ ಐದು ಭರವಸೆ ಈಡೇರಿಸಬೇಕು ಎಂದು ಒತ್ತಾಯಿಸಿ ಏಳು ತಂಡಗಳು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಧರಣಿ ನಡೆಲಾಗುವುದು.ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳಾಗಿದೆ ಅಷ್ಟರಲ್ಲೇ ಸರ್ಕಾರದ ಹಣೇಬರಹ ಜನರಮುಂದೆ ಬದಲಾಗುತ್ತಿದೆ ಎಂದರು. ಪ್ರಧಾನಿ ಮೋದಿಯವರು ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ.ಜಗತ್ತಿನಲ್ಲಿ ಮೊದಲಬಾರಿಗೆ ವಿಶ್ವ ಸಂಸ್ಥೆಯಲ್ಲಿ ಭಾರತದ ಯೋಗ ಹೆಸರಾಗಿದೆ. ವಿಶ್ವದ ೧೬೦ ಕ್ಕೂ ಹೆಚ್ಚು ದೇಶಗಳು ವಿಶ್ವಸಂಸ್ಥೆಯಲ್ಲಿ ಯೋಗ ಮಾಡಿದ್ದಾರೆ. ಭಾರತದ ಅಭಿವೃದ್ಧಿಯನ್ನು ವಿಶ್ವವೇ ನೋಡುವಂತೆ ಮಾಡಿದ್ದಾರೆ ಮೋದಿ.ಅಕ್ಕಿ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಕೇಂದ್ರ ಸರ್ಕಾರದ ಅನುಮತಿ ಪಡೆಯದೆಯೇ ಅಕ್ಕಿ ನೀಡುವುದಾಗಿ ಘೋಷಣೆ ಮಾಡುವುದು ಸರಿಯಲ್ಲ ಸಿಎಂ ಸಿದ್ದರಾಮಯ್ಯ ಹೇಳಿದಂತೆ ಹತ್ತು ಕೆಜಿ ಹಾಗೂ ಕೇಂದ್ರದ ಐದು ಕೆಜಿ ಸೇರಿದಂತೆ ಹದಿನೈದು ಕೆಜಿ ಅಕ್ಕಿ ನೀಡಬೇಕು ಎಂದರು.