ಹುಬ್ಬಳ್ಳಿ,ಜೂ11: ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡುತ್ತಿರುವುದು ಸಂತಸ ತಂದಿದೆ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡುತ್ತಿದ್ದಾರೆ. ಎಲ್ಲ ಜಿಲ್ಲೆಗಳಲ್ಲೂ ಉಸ್ತುವಾರಿ ಸಚಿವರುಗಳಿಗೆ ಸಾಂಕೇತಿಕವಾಗಿ ಚಾಲನೆ ನೀಡಲು ತಿಳಿಸಿದ್ದಾರೆ ಎಂದರು.
ಐದು ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದ್ದು ಇದು ಸಂಪೂರ್ಣ ಯಶಸ್ವಿಯಾಗಲಿದೆ ಎಂದು ಅವರು ಹೇಳಿದರು.
ಕಾರ್ಮಿಕ ಇಲಾಖೆಯಲ್ಲಿನ ಹಣವನ್ನು ಮುಂದಿನ ದಿನಗಳಲ್ಲಿ ಹೊಸ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಬದಲಾವಣೆ ತರುತ್ತೇವೆ ಎಂದು ಅವರು ಹೇಳಿದರು.