ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಮಾ. ೪ರಂದು ಪ್ರತಿಭಟನೆ-ನಾಗವೇಣಿ

ರಾಯಚೂರು, ಮಾ.೦೩-ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರ ಪದೇ ಪದೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡುತ್ತಲೇ ಸಾಗಿದೆ. ಈ ನೀತಿಯನ್ನು ಖಂಡಿಸಿ ದಿ. ೪ರಂದು ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದಿಂದ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷರಾದ ಡಾ.ನಾಗವೇಣಿ ಎಸ್ ಪಾಟೀಲ್ ತುರ್ವಿಹಾಳ್ ಅವರು ಹೇಳಿದರು.
ದಿ. ೪ರಂದು ಬೆಳಿಗ್ಗೆ ೧೧:೦೦ ಗಂಟೆಗೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಧರಣಿಯನ್ನು ಹಮ್ಮಿಕೊಳ್ಳಲಾಗಿದ್ದು ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸುತ್ತೇವೆ.
ಈ ಒಂದು ಧರಣಿಯಲ್ಲಿ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ತಾಲೂಕು ಅಧ್ಯಕ್ಷರು ಪ್ರಮುಖ ಪದಾಧಿಕಾರಿಗಳು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಮತ್ತು ದುರಾಡಳಿತ ವ್ಯವಸ್ಥೆ ಬಗ್ಗೆ ಜನರಿಗೆ ತಿಳಿಸಲಾಗುವುದು ಎಂದು ನಾಗವೇಣಿ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದರು.