ಗ್ರಾಪಂ ಚುನಾವಣೆ : ಜಿಲ್ಲೆಯಲ್ಲಿ ಕಾಂಗ್ರೆಸ್ ಬೆಂಬಲಿತರು ಅಧಿಕ ಸಂಖ್ಯೆಯಲ್ಲಿ ಗೆಲವು

ದಾವಣಗೆರೆ.ಜ.೧;: ದಾವಣಗೆರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅಧಿಕ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರರಾದ ಡಿ.ಬಸವರಾಜ್ ಅಭಿಪ್ರಾಯ ಪಟ್ಟಿದ್ದಾರೆ. ಕಾಂಗ್ರೆಸ್ ಬೆಂಬಲಿತರ ಗೆಲುವಿಗೆ ಮತದಾನ ಮಾಡಿದ ಮತದಾರರಿಗೆ ಪಕ್ಷದ ಕಾರ್ಯಕರ್ತರಿಗೆ ಮುಖಂಡರಿಗೆ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರದ ಯೋಜನೆಗಳಾದ ರಾಷ್ಟ್ರೀಯ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ , ಸಿದ್ದರಾಮಯ್ಯ ಸರಕಾರದ ಜನಪರ ಯೋಜನೆಗಳಾದ ಅನ್ನಭಾಗ್ಯ, ರೈತ ಭಾಗ್ಯ ಸೇರಿದಂತೆ ನೂರಾರು ಅಭಿವೃದ್ದಿ ಪರ ಯೋಜನೆಗಳನ್ನು ಗುರುತಿಸಿ ಗ್ರಾಮೀಣರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ರ‍್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ರೈತ ವಿರೋಧಿ ಕಾಯ್ದೆಗಳಾದ ಭೂಸುಧಾರಣೆ ಕಾಯ್ದೆ, ಕೃಷಿ ಮಾರುಕಟ್ಟೆ, ಕಾರ್ಮಿಕ ವಿರೋಧಿ ಕಾಯ್ದೆಗಳ ವಿರುದ್ದವಾಗಿ ಗ್ರಾಮೀಣ ಪ್ರದೇಶದ ಜನತೆ ಮತದಾನ ಮಾಡಿದ್ದಾರೆ. ಈ ಫಲಿತಾಂಶ ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿ ವಿರುದ್ದ ಜನ ನೀಡಿದ ತೀರ್ಪ ಆಗಿದೆ. ಗೆಲವು ಸಾಧಿಸಿದ ಗ್ರಾಮ ಪಂಚಾಯತ್ ಸದಸ್ಯರು ಬರಲಿರುವ ದಿನಗಳಲ್ಲಿ ಮತದಾರರು ತಮ್ಮ ಮೇಲಿಟ್ಟಿರುವ ವಿಶ್ವಾಸ ಉಳಿಸಿ ಗ್ರಾಮಾಭಿವೃದ್ದಿಯಲ್ಲಿ ತೊಡಗುವ ಮೂಲಕ ಪಂಚಾಯತ್ ರಾಜ್  ವ್ಯವಸ್ಥೆ ಸದೃಢಗೊಳಿಸುವಂತಾಗಲಿ ಎಂದು ನೂತನ ಸದಸ್ಯರಿಗೆ  ಹಾರೈಸಿದ್ದಾರೆ.