ಗ್ರಾಪಂ ಚುನಾವಣೆ: ಬಿಜೆಪಿಯ ಜನಪರ ಯೋಜನೆಗೆ ಸಿಕ್ಕ ಜಯ

ಕಲಬುರಗಿ,ಜ.2- ಗ್ರಾಮ ಪಂಚಾಯತ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದು, ಈ ಮೂಲಕ ಬಿಜೆಪಿಯ ಬಲ ಇನ್ನಷ್ಟು ವೃದ್ದಿಯಾಗಿದೆ ಎಂದು ಬಿಜೆಪಿ ಗ್ರಾಮೀಣ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರವೀಣ ತೆಗನೂರ ಅವರು ಹೇಳಿದ್ದಾರೆ.
ಪ್ರಧಾನಿ ರರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವರ್ಚಸ್ಸಿನಿಂದಾಗಿ ಬಿಜೆಪಿಗೆ ಜಯ ಸಿಕ್ಕಿದೆ. ಇತ್ತೀಚೆಗೆ ನಡೆದ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ಕಮಲ ಪಡೆ ಮೇಲುಗೈ ಸಾಧಿಸಿದೆ.
ಶೇ.60ಕ್ಕೂ ಹೆಚ್ಚು ಗ್ರಾಪಂ ಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದ ಪ್ರವೀಣ ತೆಗನೂರ ಅವರು, ನೂತನ ಗಾಪಂ ಸದಸ್ಯರು ತಮ್ಮ ಗ್ರಾಮ, ವಾರ್ಡಗಳಲ್ಲಿ ಅಭಿವೃದ್ಧಿಗಾಗಿ ಶ್ರಮಿಸಬೇಕು. ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದರು.
ಸರ್ಕಾರದ ವಿವಿಧ ಯೋಜನೆಗಳ ಲಾಭವನ್ನು ಜನಸಾಮಾನ್ಯರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಅವರು ಸಲಹೆ ನೀಡಿದರು.