ಗ್ರಾಫಿಕ್ ಡಿಸೈನಿಂಗ್ ಸ್ವಯಂ ಉದ್ಯೋಗಕ್ಕೆ ಸಹಾಯಕಾರಿ: ಡಾ. ಯು.ಟಿ. ವಿಜಯ್

ವಿಜಯಪುರ,ಜೂ.4: ಗ್ರಾಫಿಕ್ ಡಿಸೈನಿಂಗ್ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿದ್ದು ಈ ಕಾರ್ಯಾಗಾರದ ಮೂಲಕ ಗಳಿಸುವ ಕೌಶಲಗಳು ಸ್ವಯಂ ಉದ್ಯೋಗಕ್ಕೆ ದಾರಿ ಮಾಡಿಕೊಡುವಂತಾಗಲಿ ಎಂದು ಬೆಂಗಳೂರಿನ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಕಾರ್ಯ ನಿರ್ವಾಹಕ ಕಾರ್ಯದರ್ಶಿ ಡಾ. ಯು.ಟಿ. ವಿಜಯ್ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಬೆಂಗಳೂರಿನ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಐಐಎಸ್‍ಸಿ ಇವರ ಸಹಯೋಗದಲ್ಲಿ ಆಯೋಜಿಸಿರುವ ಐದು ದಿನಗಳ “ಗ್ರಾಫಿಕ್ ಡಿಸೈನಿಂಗ್ ಕೌಶಲ್ಯ” ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಕಾರ್ಯಾಗಾರ ನಿಮ್ಮ ಭವಿಷ್ಯದಲ್ಲಿ ಒಂದು ಅತ್ಯುತ್ತಮ ಕಲಿಕೆಯಾಗಲಿದೆ ಮತ್ತು ನಿಮ್ಮ ವೃತ್ತಿ ಜೀವನಕ್ಕೆ ಸಹಕಾರಿಯಾಗಲಿದೆ ಎಂದರು.
ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಹಿಂದುಳಿದ ವಿದ್ಯಾರ್ಥಿನಿಯರಿಗಾಗಿ ಇದು ಒಂದು ಅತ್ಯುತ್ತಮ, ಕೌಶಲ್ಯಭರಿತ ಕಾರ್ಯಾಗಾರವನ್ನು ರೂಪಿಸಬೇಕೆಂಬ ನಮ್ಮ ಆಲೋಚನೆ ಈ ಕಾರ್ಯಾಗಾರ ಹಮ್ಮಿಕೊಳ್ಳುವ ಮೂಲಕ ಸಾಕಾರಗೊಂಡಿದೆ. ನಿಮ್ಮೆಲ್ಲರ ಹುರುಪು ಮತ್ತು ಹುಮ್ಮಸ್ಸಿನಿಂದ ಈ ಕಾರ್ಯಾಗಾರಕ್ಕೆ ಒಂದು ಅತ್ಯುತ್ತಮ ಚಾಲನೆ ದೊರಕಿದೆ. ಈ ಕಾರ್ಯಾಗಾರದ ಪ್ರಯೋಜನವನ್ನು ಪ್ರತಿಯೊಬ್ಬ ವಿದ್ಯಾರ್ಥಿನಿಯೂ ಪಡೆದುಕೊಳ್ಳಬೇಕು ಎಂದು ಅವರು ಸಲಹೆ ಮಾಡಿದರು.
ಈ ತರಬೇತಿಯಲ್ಲಿ ನೀವು ನಿಮ್ಮ ಕುಟುಂಬ, ನಿಮ್ಮೆಲ್ಲ ಚಿಂತೆಗಳನ್ನು ಬಿಟ್ಟು ನೀವು ಭಾಗವಹಿಸುವ ಮೂಲಕ ಹೊಸ- ಹೊಸ ಕೌಶಲ್ಯಗಳನ್ನು ಕಲಿಯುವ ಮೂಲಕ ಅವುಗಳನ್ನು ನಿಮ್ಮಲ್ಲಿ ಅಳವಡಿಸಿಕೊಳÀ್ಳಬೇಕು ಎಂದು ಆಶಯ ವ್ಯಕ್ತಪಡಿಸಿದರು.
ನಮ್ಮ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯಿಂದ ಇಂತಹ ಹತ್ತು- ಹಲವಾರು ಕಾರ್ಯಕ್ರಮಗಳನ್ನು ನಾವು ರೂಪಿಸುತ್ತ ಬಂದ್ದಿದ್ದೇವೆ. ಇನ್ನು ಶಿಕ್ಷಣ ಕ್ಷೇತ್ರದಲ್ಲಿ ಸುಮಾರು 47 ವರ್ಷಗಳಿಂದ ವಿದ್ಯಾರ್ಥಿ ಯೋಜನೆ ಅಡಿಯಲ್ಲಿ ಸಾಕಷ್ಟು ಕೆಲಸಗಳನ್ನು ಮಾಡುತ್ತಾ ಬಂದಿದ್ದೇವೆ. ಈ ರೀತಿಯ ಸಾವಿರಾರು ವಿದ್ಯಾರ್ಥಿಗಳಿಗೆ ಈ ಪ್ರಯೋಜನ ನೀಡುತ್ತಿದ್ದೇವೆ. ಒಟ್ಟಿನಲ್ಲಿ ವಿದ್ಯಾರ್ಥಿಗಳ ಬದುಕು ಹಸನಾಗಲಿ ಎನ್ನುವುದೆ ನಮ್ಮ ಉದ್ದೇಶ. ಮತ್ತು ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಪ್ರಾಮುಖ್ಯತೆ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ನಾವು ಮಾಡುತ್ತಾ ಬಂದಿದ್ದು ನಮಗೆ ಖುಷಿ ತಂದಿದೆ ಎಂದರು.
ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಪಂಚಾಯತ್‍ನ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲೀಕ ಮಾನವರ ಮಾತನಾಡಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಇಂತಹ ಅತ್ಯುತ್ತಮವಾದ ಕಾರ್ಯಾಗಾರ ಹಮ್ಮಿಕೊೂಂಡಿದ್ದು ವಿಶೇಷ. ವಿದ್ಯಾರ್ಥಿ ದೆಸೆಯಲ್ಲಿಯೇ ವಿದ್ಯಾರ್ಥಿನಿಯರಿಗೆ ಕೌಶಲ್ಯಗಳನ್ನು ಕಲಿಸುವ ಮೂಲಕ ಅವರನ್ನು ಔದ್ಯೋಗಿಕ ಜೀವನಕ್ಕೆ ಪರಿಪೂರ್ಣವಾಗಿ ಸಿದ್ಧ ಮಾಡಿ ಕಳುಹಿಸಿ ಕೊಡುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯ. ಯಾವುದೇ ಒಂದು ಕ್ಷೇತ್ರದಲ್ಲಿ ನಾವು ಸಾಧನೆ ಮಾಡಬೇಕೆಂದರೆ ಕಲಿಕೆ ಅತೀ ಮುಖ್ಯ. ಹೀಗಾಗಿ ನೀವು ಈ ಕಾರ್ಯಾಗಾರದಲ್ಲಿ ಏಕಾಗೃತೆಯಿಂದ ಭಾಗವಹಿಸಿ ಕೌಶಲ್ಯಗಳನ್ನು ಕಲಿತು ಅವುಗಳನ್ನು ನಿಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಮುಂದೆ ಬರಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವಿಯ ಮೌಲ್ಯಮಾಪನ ಕುಲಸಚಿವ ಎಚ್.ಎಂ. ಚಂದ್ರಶೇಖರ ಮಾತನಾಡಿ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಮತ್ತು ನಮ್ಮ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಇಂತಹ ಒಂದು ಒಳ್ಳೆಯ ಕಾರ್ಯಕ್ರಮವನ್ನು ಆಯೋಜಿಸಿದ್ದು ಅತ್ಯಂತ ಖುಷಿ ಮತ್ತು ಹೆಮ್ಮೆಯ ವಿಷಯ. ಇದರಿಂದ ಹಲವಾರು ವಿದ್ಯಾರ್ಥಿನಿಯರ ಬದುಕಿಗೆ ಸಹಕಾರವಾಗುತ್ತದೆ ಎಂದರು.
ಪ್ರತಿಯೊಬ್ಬರಿಗೂ ಅವಕಾಶ ಸಿಗುವುದಿಲ್ಲ. ಸಿಕ್ಕಿರುವ ಅವಕಾಶದ ಸದುಪಯೋಗವನ್ನು ಬಹಳ ಅಚ್ಚುಕಟ್ಟಾಗಿ ಪಡೆದುಕೊಳ್ಳಬೇಕು. ನಾವು ನಮ್ಮ ಜೀವನದಲ್ಲಿ ಯಶಸ್ಸನ್ನು ಕಾಣಬೇಕೆಂದರೆ ಕೌಶಲ್ಯ ಅತೀ ಮುಖ್ಯ. ಹೀಗಾಗಿ ನೀವೆಲ್ಲರೂ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖಸ್ಥ ಪೆÇ್ರ. ಓಂಕಾರ ಕಾಕಡೆ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಪ್ರಾಜೆಕ್ಟ್ ಎಂಜಿನಿಯರ್, ಕೆಎಸ್‍ಸಿಎಸ್‍ಟಿ ಮತ್ತು ಕೋರ್ಸ್ ಸಂಯೋಜಕ ಗಂಗಾಧರಪ್ಪ ಆರ್ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ಡಾ.ತಹಮೀನಾ ಕೋಲಾರ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕ ಸಂದೀಪ ವಂದಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಎಂ.ಎಂ.ಪಾಟೀಲ, ವಿಶ್ವನಾಥ ಮುನವಳ್ಳಿ, ವಿವಿಧ ಜಿಲ್ಲೆಯ ವಿದ್ಯಾರ್ಥಿನಿಯರು, ಪ್ರಾಧ್ಯಾಪಕರು, ವಿವಿಯ ವಿವಿಧ ವಿಭಾಗಗಳ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು, ಸಂಶೋಧನಾ ವಿದ್ಯಾರ್ಥಿನಿಯರು, ಬೋಧಕ ಮತ್ತು ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.