ಗ್ರಾಮಗಳಲ್ಲಿ ಸ್ಯಾನಿಟೈಸರ್ ಸಿಂಪಡಣೆ

ಕೋಲಾರ,ಮಾ.೪:ಕೊರೋನಾ ಮಹಾಮಾರಿ ೨ನೇ ಅಲೆಯಿಂದ ಜನತೆ ತುಂಬಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದನ್ನು ಮನಗಂಡ ಕೊಂಡರಾಜನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪ ಬಾಬು ರವರು ಖಾದ್ರಿಪುರ ಗ್ರಾಮ ಸೇರಿದಂತೆ ಅಂತರಗಂಗೆ ಬೆಟ್ಟದಲ್ಲಿರುವ ತೇರಹಳ್ಳಿ, ಪಾಪರಾಜನಹಳ್ಳಿ ಗ್ರಾಮಗಳಲ್ಲಿ ಗ್ರಾಮ ಪಂಚಾಯತಿ ಸದಸ್ಯರ ನೇತೃತ್ವದಲ್ಲಿ ಸ್ಯಾನಿಟೈಜರ್ ಸಿಂಪಡಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಮಾತನಾಡಿ, ಗ್ರಾಮ ಪಂಚಾಯತಿ ಅಧ್ಯಕ್ಷರಾಗಿರುವ ಪುಷ್ಪ ಬಾಬು ರವರು ತಾವು ಅಧಿಕಾರ ವಹಿಸಿಕೊಂಡಾಗಿನಿಂದ ಉತ್ತಮ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಾ, ಕರೋನಾದಂತಹ ಕಠಿಣ ಪರಿಸ್ಥಿತಿಯಲ್ಲಿ ತಾನೇ ಮುಂದೆ ನಿಂತು ಸ್ಯಾನಿಟೈಜರ್ ಸಿಂಪಡಣೆ ಮಾಡಿಸುವ ಮೂಲಕ ಕರೋನಾ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿರುವುದು ಬೇರೆಯವರಿಗೆ ಮಾದರಿಯಾಗಲಿ ಎಂದು ಆಶಿಸಿದರು.
ಕರೋನಾ ಸಂದರ್ಭದಲ್ಲಿ ಹೆಣ್ಣೆಂಬುದನ್ನು ಲೆಕ್ಕಿಸದೆ ಕೊಂಡರಾಜನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರು ಪಂಚಾಯತಿ ವ್ಯಾಪ್ತಿಗೆ ಬರುವ ಹಳ್ಳಿಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಮಾಸ್ಕ್ ಧರಿಸಿ, ಸ್ಯಾನಿಟೈಜರ್ ಬಳಸಿ, ಸಾಮಾಜಿಕ ಅಂತರವನ್ನು ಕಾಪಾಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.