ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ ನೀಡಿ: ಬೆಲ್ದಾಳೆ

ಬೀದರ:ಜ.1: ಮೊನ್ನೆ ಗ್ರಾಮ ಪಂಚಾಯತ್ ಚುನಾವಣೆ ಅಂತಿಮ ಫಲಿತಾಂಶ ಪ್ರಕಟವಾಗಿದ್ದು. ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲಾ ಅಭ್ಯರ್ಥಿಗಳಿಗೆ ಅಭಿನಂದಿಸುವುದಾಗಿ ಕರ್ನಾಟಕ ಕೈಗಾರಿಕೆ ಮತ್ತು ಮೂಲ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿ, ಚುನಾವಣೆ ಸ್ಪರ್ಧಿಸಿದ ಎಲ್ಲಾ ಅಭ್ಯರ್ಥಿಗಳಿಗೂ ಅಭಿನಂದಿಸಿದ ಅವರು, ಸೋಲು ಗೆಲುವು ಸಮನಾಗಿ ಸ್ವೀಕರಿಸುವುದರ ಜೊತೆಗೆ ಎಲ್ಲರೂ ಗ್ರಾಮಸ್ಥರು ಒಟ್ಟಾಗಿ ಗ್ರಾಮದ ಅಭಿವೃದ್ಧಿಗೆ ಕೈ ಜೊಡಿಸುವ ಮೂಲಕ ಉತ್ತಮ ಗ್ರಾಮಗಳನ್ನಾಗಿ ಅಭಿವೃದ್ಧಿ ಮಾಡಿ ದೇಶಕ್ಕೆ ಮಾದರಿ ಗ್ರಾಮಗಳನ್ನಾಗಿ ಮಾಡಲು ಮುಂದಾಗಿ ಎಂದು ವಿನಂತಿಸುವುದಾಗಿ ಬೆಲ್ದಾಳೆ ಹೇಳಿದ್ದಾರೆ.