ಗ್ರಾಮಗಳ ಅಭಿವೃದ್ಧಿ ನನ್ನ ಗುರಿ

ಮಾಲೂರು.ಆ೧೪: ಶಿವಾರಪಟ್ಟಣ ಗ್ರಾಮ ಪಂಚಾಯಿತಿಯ ಎಲ್ಲಾ ಗ್ರಾಮಗಳನ್ನು ಪಕ್ಷಾತೀತವಾಗಿ ಸರ್ವತೋಮುಖ ಅಭಿವೃದ್ಧಿ ಮಾಡುವುದಾಗಿ ನೂತನ ಅಧ್ಯಕ್ಷ ಮುನೇಗೌಡ ತಿಳಿಸಿದರು.
ತಾಲೂಕಿನಲ್ಲಿ ಎರಡನೆಯ ಅವಧಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಶಿವಾರಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ ನಡೆದ ಚುನಾವಣೆಯಲ್ಲಿ ಸಾಮಾನ್ಯವರ್ಗದ ಅಧ್ಯಕ್ಷ ಸ್ಥಾನದ ಪ್ರತಿಸ್ಪರ್ದಿ ವೆಂಕಟಸ್ವಾಮಿಗಿಂತ ಹೆಚ್ಚು ೫ ಮತಗಳನ್ನು ಪಡೆದು ಜಯಗಳಿಸಿ ಮಾತನಾಡಿದರು.
ತಾಲೂಕಿನ ಶಾಸಕ ಕೆ.ವೈ.ನಂಜೇಗೌಡರ ಮತ್ತು ನಮ್ಮ ಗ್ರಾಮ ಪಂಚಾಯತಿ ಸದಸ್ಯರು ಹಿರಿಯರ ಮಾರ್ಗದರ್ಶನ ಮತ್ತು ಸಹಕಾರದಿಂದ ಶಿವಾರ ಪಟ್ಟಣದ ಗ್ರಾಮ ಪಂಚಾಯಿತಿ ಅಧ್ಯಕ್ಷನಾಗಿ ಎರಡನೆಯ ಅವಧಿಗೆ ಆಯ್ಕೆಯಾಗಿದ್ದು ಪಂಚಾಯಿತಿಯ ಎಲ್ಲಾ ಗ್ರಾಮಗಳನ್ನು ಪಕ್ಷಾತೀತವಾಗಿ ಅಭಿವೃದ್ಧಿ ಪಡಿಸಲು ಶ್ರಮಿಸುವುದಾಗಿ ತಿಳಿಸಿದರು.
ಉಪಾಧ್ಯಕ್ಷ ತಿಮ್ಮಯ್ಯ ಮುನಿಯಪ್ಪ ಮಾತನಾಡಿ ನನ್ನ ಪ್ರತಿಸ್ಪರ್ಧಿ ಆಶಾರವರಿಗಿಂತ ೫ ಮತಗಳ ಅಂತರದಲ್ಲಿ ಉಪಾಧ್ಯಕ್ಷನಾಗಿ ನನ್ನನ್ನು ಆಯ್ಕೆ ಮಾಡಿದ ಸದಸ್ಯರು ಮುಖಂಡರಿಗೆ ನಾನು ಕೃತಜ್ಞತೆಗಳು ಸಲ್ಲಿಸುವುದಾಗಿ ಹೇಳಿದ ಅವರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಅಧ್ಯಕ್ಷರು ಹಾಗೂ ಸದಸ್ಯರಿಗೆ ಹೆಚ್ಚಿನ ಸಹಕಾರ ನೀಡುವುದಾಗಿ ಹೇಳಿದರು.
ಶಾಸಕ ಕೆ.ವೈ.ನಂಜೇಗೌಡ ಅವರನ್ನು ನೂತನ ಅಧ್ಯಕ್ಷ ಉಪಾಧ್ಯಕ್ಷರು ಪಟ್ಟಣದ ಕೋಚಿಮುಲ್ ಶಿಬಿರ ಕಛೇರಿಯಲ್ಲಿ ಅಧ್ಯಕ್ಷ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಸಹಕರಿಸಿದರಿಂದ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾಲೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಧುಸೂದನ್ ಗ್ರಾ ಪಂನ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು ಜಗನ್ನಾಥಾಚಾರಿ, ಮುನಿರತ್ನಮ್ಮ ಮುಖಂಡರು ಗ್ರಾಮದ ಹಿರಿಯರು ಉಪಸ್ಥಿತರಿದ್ದರು.