ಗ್ರಾಮಸ್ಥರೇ ಮನರೇಗಾಯೋಜನೆ ಸದುಪಯೋಗಪಡಿಸಿಕೊಳ್ಳಿ

ಹನೂರು: ಜ.09: ಗ್ರಾಮಗಳ ಅಭಿವೃ ದ್ಧಿಗೆ ಮನರೇಗಾಯೋಜನೆ ಅತ್ಯಂತ ಉಪಯೋ ಗಕಾರಿಯಾಗಿದೆ. ಈ ಯೋಜನೆಯ ಅನುಕೂಲವನ್ನು ಗ್ರಾಮಸ್ಥರು ಸದುಪ ಯೋಗ ಪಡಿಸಿಕೊಳ್ಳಬೇಕೆಂದು ನೋಡೆಲ್ ಅಧಿಕಾರಿ ಬಿ.ಆರ್.ಸಿ ಹೆಚ್.ಕ್ಯಾತ ತಿಳಿಸಿದರು.
ಹನೂರು ತಾಲ್ಲೂಕಿನ ಎಲ್ಲೇ ಮಾಳ ಗ್ರಾಮ ಪಂಚಾಯಿತಿ ಕಾರ್ಯಾಲಯದ ವತಿಯಿಂದ ಏರ್ಪಡಿಸಲಾಗಿದ್ದ 2020-21 ನೇ ಸಾಲಿನ ಎರಡನೇ ಹಂತದ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಯಲ್ಲಿ ಅವರು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು.
ಆಯಾ ಗ್ರಾ.ಪಂ.ವ್ಯಾಪ್ತಿಯ ಜನತೆ ಮನರೇಗಾ ಯೋಜನೆಯಡಿಯಲ್ಲಿ ಸಮುದಾಯ ಆಧಾರಿತ ಹಾಗೂ ವೈಯಕ್ತಿಕ ಅಭಿವೃದ್ಧಿ ಕಾಮಗಾರಿಗಳನ್ನು ಸೃಜಿಸಿಕೊಳ್ಳುವಲ್ಲಿ ಮುಂದಾಗಬೇಕೆಂದು ಸಲಹೆ ನೀಡಿದರು. ಜಿ.ಪಂ.ಸದಸ್ಯೆ ಮಂಜುಳರಂಗಸ್ವಾಮಿ ಮಾತನಾಡಿ, ಗ್ರಾ.ಪಂ.ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಶಿಕ್ಷಣಕ್ಕೆ ಒತ್ತು ನೀಡಬೇಕು. ಪ್ರಮುಖವಾಗಿ ಮೂಲಭೂತ ಸೌಕರ್ಯಗಳಿಗೆ ಗಮನ ಹರಿಸುವ ಜೊತೆಗೆ ಸರ್ಕಾರದ ಅನುದಾನ ಆಯಾಅರ್ಹ ಫಲಾನು ಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಮಾಣಿಕವಾಗಿ ಶ್ರಮಿಸಬೇಕೆಂದು ತಿಳಿಸಿದರು.
ಗ್ರಾ.ಪಂ. ಪಿಡಿಒ ರಮೇಶ್ ಮಾತನಾಡಿ, ಕೊರೊನಾದಂತ ಸಂಕಷ್ಟದ ಪರಿಸ್ಥಿತಿಯಲ್ಲಿ ಜಿಲ್ಲಾಡಳಿತ ಹಾಗೂ ಜಿ.ಪಂ. ಕಾರ್ಯನಿರ್ವಹಣಾಧಿಕಾರಿಗಳ ಮಾರ್ಗದರ್ಶನದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮನರೇಗಾಯೋಜನೆಯಡಿ ಸಮುದಾಯ ಆಧಾರಿತ ಹಾಗೂ ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಆಯಾ ಗ್ರಾಮಗಳಿಗೆ ಬೇಟಿ ನೀಡಿ ಮಹಿಳಾ ಸಂಘ ಸಂಸ್ಥೆಗಳು ಸೇರಿದಂತೆ ಗ್ರಾಮಸ್ಥರಿಗೆ ಉದ್ಯೋಗಖಾತ್ರಿ ಯೋಜನೆ ಯಡಿದೊರಕುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಮನರೇಗಾ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಗಳ ವಿವರವನ್ನು ಸಭೆಯಲ್ಲಿ ಮಂಡಿಸಲಾಯಿತು.
ಈ ಸಂದರ್ಭದಲ್ಲಿ ಸಹಾಯಕ ಅಭಿಯಂತರ ಸಿದ್ದಪ್ಪಾಜಿಗೌಡ, ತಾ.ಪಂ.ಸದಸ್ಯ ಸಣ್ಣಕಾಳಶೆಟ್ಟಿ, ಮನರೇಗಾ ತಾಲ್ಲೂಕು ಸಂಯೋಜನಾಧಿಕಾರಿ ನಾರಾಯಣ ಹಾಗೂ ಸಾರ್ವಜನಿಕರು ಇದ್ದರು.