ಗ್ರಾಮಾಂತರ ವಿಭಾಗದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ

ಮಂಡ್ಯ:ಏ:20: ಮಂಡ್ಯ ಗ್ರಾಮಾಂತರ ವಿಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ ಬಲವರ್ಧನೆಗೊಳಿಸುವುದಾಗಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ಮಂಡ್ಯ ತಾಲೂಕು ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಡಿ. ರಮೇಶ್ ತಿಳಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್ ಹಾಗೂ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಅವರಿಂದ ನೇಮಕಾತಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಅವರು, ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಅವರ ನಾಯಕತ್ವವವನ್ನು ಅನುಸರಿಸುತ್ತಾಘಿ, ಪಕ್ಷದಲ್ಲಿ ದುಡಿಯುವುದಾಗಿ ತಿಳಿಸಿದರು.
ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ಜನವಿರೋಧಿ ಧೋರಣೆ ಬಗ್ಗೆ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗುತ್ತಿದ್ದುಘಿ, ಅದನ್ನೆಲ್ಲಾ ವ್ಯವಸ್ಥಿತವಾಗಿ ಸಂಘಟಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ವಿಭಾಗ ಸಕ್ರಿಯವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿ.ಎಂ. ದ್ಯಾವಪ್ಪಘಿ, ಓಬಿಸಿ ಕಾಂಗ್ರೆಸ್‍ನ ನೂತನ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಾಜಣ್ಣಘಿ, ಮುಖಂಡ ರಾಮಕೃಷ್ಣ ಮತ್ತಿತರರಿದ್ದರು.