ಗ್ರಾಮಾಯಣಕ್ಕೆ ಮತ್ತೆ ಚಾಲನೆ

ಗ್ರಾಮಾಯಣ ಚಿತ್ರ ಸದ್ದು ಮಾಡಿ ಸುಮ್ಮನಾಗಿತ್ತು. ಇದೀಗ ನಿರ್ಮಾಪಕರು ಬದಲಾಗಿದ್ದಾರೆ. ಹಳಬರ ಸ್ಥಾನಕ್ಕೆ ಈಗ ಜಿ.ಮನೋಹರನ್ ಹಾಗೂ ಕೆ.ಪಿ ಶ್ರೀಕಾಂತ್ ಬಂದಿದ್ದಾರೆ. ದೇವನೂರು ಚಂದ್ರು ನಿರ್ದೇಶನದಲ್ಲಿ ವಿನಯ್ ರಾಜಕುಮಾರ್ ನಾಯಕರಾಗಿ ಕಾಣಿಸಿಕೊಂಡಿರುವ ಚಿತ್ರದ ಮುಹೂರ್ತ ನೆರವೇರಿದೆ.

ಚಿತ್ರಕ್ಕೆ ನಟ ಉಪೇಂದ್ರ ಆರಂಭ ಫಲಕ ತೋರಿಸಿದರೆ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು. ರಾಘವೇಂದ್ರ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್, ದುನಿಯಾ ವಿಜಯ್, ಧ್ರುವ ಸರ್ಜಾ, ರಾಜ್ ಬಿ ಶೆಟ್ಟಿ, ಆರ್ ಚಂದ್ರು, ಪವನ್ ಒಡೆಯರ್, ಸಿಂಪಲ್ ಸುನಿ ಸೇರಿದಂತೆ ಅನೇಕ ಗಣ್ಯರು ಚಿತ್ರತಂಡಕ್ಕೆ ಶುಭಹಾರೈಸಿದರು.

ಈ ವೇಳೆ ಮಾತಿಗಿಳಿದ ನಿರ್ದೇಶಕ ದೇವನೂರು ಚಂದ್ರು,”ಗ್ರಾಮಾಯಣ”  ಗ್ರಾಮದಲ್ಲೇ ನಡೆಯುವ ಕಥೆ. ಇದುವರೆಗೂ ನೋಡಿರದ ವಿನಯ್ ರಾಜಕುಮಾರ್ ಅವರನ್ನು  ಚಿತ್ರದಲ್ಲಿ ನೋಡಬಹುದು. ಚಿಕ್ಕಮಗಳೂರು, ದೇವರಾಯಸಮುದ್ರ, ಅರಸಿಕೆರೆ, ಕಡೂರು ಸುತ್ತಮುತ್ತ ಚಿತ್ರೀಕರಣ ಮಾಡಲಿದ್ದೇವೆ ಎನ್ನುವ ವಿವರ ನೀಡಿದರು.

ಯಶಸ್ವಿನಿ ಅಂಚಲ್  ಛಾಯಾಗ್ರಹಣ ಹಾಗೂ ಪೂರ್ಣಚಂದ್ರ ತೇಜಸ್ವಿ  ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಅಚ್ಯುತಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಅರುಣ್ ಸಾಗರ್, ಅಪರ್ಣ, ಸೀತಾ ಕೋಟೆ, ಶ್ರೀನಿವಾಸ ಪ್ರಭು, ಮಂಜುನಾಥ್ ಹೆಗೆಡೆ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂದರು.

ನಟ ವಿನಯ್ ರಾಜ್‍ಕುಮಾರ್, ಈಗಿನ ಯುವಕರ ದೃಷ್ಟಿಕೋನದಲ್ಲಿ ಹಳ್ಳಿ ಹೇಗೆ ಕಾಣಿಸುತ್ತದೆ ಎನ್ನುವುದೇ “ಗ್ರಾಮಾಯಣ. ನಾನು ಈವರೆಗೂ ಮಾಡಿರದ ಪಾತ್ರವಿದು ಎಂದು ಹೇಳಿಕೊಂಡರು

ನಿರ್ಮಾಪಕ ಕೆಪಿ ಶ್ರೀಕಾಂತ್.”ಗ್ರಾಮಾಯಣ” ಟೀಸರ್ ಗೆ ಪಾಸಿಟಿವ್ ಕಾಮೆಂಟ್ಸ್ ಬಂದಿದ್ದವು. ಇಂತಹ ಒಳ್ಳೆಯ ಚಿತ್ರ ನಿಲ್ಲಬಾರದು ಎಂದು ಲಹರಿ ಫಿಲಂಸ್ ಜೊತೆ ಸೇರಿ ನಿರ್ಮಾಣ ಮಾಡುತ್ತಿದ್ದೇನೆ ಎಂದರೆಲಹರಿ ವೇಲು,”ಗ್ರಾಮಾಯಣ”ದ ಹಾಡೊಂದು ಕೇಳಿ ತುಂಬಾ ಖುಷಿಪಟ್ಟಿದೆ. ಅಣ್ಣ ಮನೋಹರನ್ ನಿರ್ಮಾಣದಲ್ಲಿ ಕೈಜೋಡಿಸಿದ್ದಾರೆ ಎಂದರು. ಕಲಾವಿದರಾದ ಅರುಣ್ ಸಾಗರ್, ಗೋಪಾಲಕೃಷ್ಣ ದೇಶಪಾಂಡೆ “ಗ್ರಾಮಾಯಣ”À ಕುರಿತು ಮಾತನಾಡಿದರು.