ಗ್ರಾಮಿಣರಲ್ಲಿ ಕೋವಿಡ್ ಜಾಗೃತಿ ಮೂಡಿಸಿ: ಖಾಶೆಂಪೂರ

ಬೀದರ:ಮೇ.20: ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನ್ನಾಎಖೇಳ್ಳಿಯಲ್ಲಿ ಬೀದರ್ ದಕ್ಷಿಣ ಶಾಸಕ ಬಂಡೆಪ್ಪ ಖಾಶೆಂಪುರ್ ಅವರು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಕೋವಿಡ್ – 19 ಕೊರೊನಾ ಮುಂಜಾಗ್ರತಾ ಕ್ರಮಗಳ ಕುರಿತು ಸಭೆ ನಡೆಸಿದರು.ಮನ್ನಾಎಖೇಳ್ಳಿಯ ಪ್ರವಾಸಿ ಮಂದಿರ, ಆಸ್ಪತ್ರೆ ಸೇರಿದಂತೆ ವಿವಿಧ ಕಡೆಗಳಲ್ಲಿ ಸಭೆ ನಡೆಸಿದ ಶಾಸಕರು, ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಅವಶ್ಯಕ ಕ್ರಮಗಳನ್ನು ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಕೊರೊನಾ ತಡೆ, ವ್ಯಾಕ್ಸಿನೇಷನ್ ಕುರಿತಂತೆ ಜನರಿಗೆ ಮನವರಿಕೆ ಮಾಡಿಕೊಡಬೇಕು. ಗ್ರಾಮಗಳಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ, ಪೆÇಲೀಸ್ ಇಲಾಖೆಯ ಅಧಿಕಾರಿಗಳು ಕಾರ್ಯಪ್ರವೃತರಾಗಬೇಕು. ಸರ್ಕಾರದಿಂದ ನ್ಯಾಯ ಬೆಲೆ ಅಂಗಡಿಗಳ ಮೂಲಕ ನೀಡಲಾಗುತ್ತಿರುವ ಆಹಾರ ಧಾನ್ಯಗಳನ್ನು ಸರಿಯಾದ ರೀತಿಯಲ್ಲಿ ಪ್ರತಿಯೊಬ್ಬರಿಗೂ ತಲುಪಿಸುವ ಕೆಲಸವನ್ನು ಮಾಡಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಅಧಿಕಾರಿಗಳಿಗೆ ತಿಳಿಸಿದರು.

ಇದೇ ವೇಳೆ ಮನ್ನಾಎಖೇಳ್ಳಿಯ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕರು, ಆಸ್ಪತ್ರೆಯ ಬೆಡ್ ವ್ಯವಸ್ಥೆ, ಚಿಕಿತ್ಸೆ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಆಸ್ಪತ್ರೆಗೆ ಬರುವ ರೋಗಿಗಳಿಗೆ ಸಮಸ್ಯೆಯಾಗದಂತೆ ಉತ್ತಮ ಸೇವೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮಾತನಾಡಿ, ಈಗಾಗಲೇ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಆರೋಗ್ಯ ಇಲಾಖೆ, ಪೆÇಲೀಸ್ ಇಲಾಖೆ, ಗ್ರಾಮ ಪಂಚಾಯ್ತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳಿದ್ದರು.