ಗ್ರಾಮೀಣದಲ್ಲಿ ಲಸಿಕೆ ಹಾಕಿಸಿಕೊಳ್ಳುವಂತೆ ಜಾಗೃತಿ ಮೂಡಿಸಿ: ದೇಸಾಯಿ


ಧಾರವಾಡ ಮೇ.21-: ಗ್ರಾಮೀಣ ಭಾಗದ ಸೋಂಕಿತರು ಕೋವಿಡ ಪರೀಕ್ಷೆಗೆ ಒಳಗಾಗಲು ಹಿಂಜರಿಯುತ್ತಿದ್ದಾರೆ. ಈ ಕುರಿತು ಅಧಿಕಾರಿಗಳು ಸೂಕ್ತ ಯೋಜನೆ ಸಿದ್ಧಪಡಿಸಿ, ಪ್ರತಿಯೊಬ್ಬರನ್ನು ತಪಾಸಣೆಗೆ ಒಳಪಡಿಸುವುದು ಹಾಗೂ ಲಸಿಕೆ ಹಾಕಿಕೊಳ್ಳುವಂತೆ ಜಾಗೃತಿ ಮೂಡಿಸಬೇಕು ಎಂದು ಶಾಸಕ ಅಮೃತ ದೇಸಾಯಿ ಸೂಚನೆ ನೀಡಿದರು.
ಧಾರವಾಡ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಗರದ ಸಕ್ರ್ಯುಟ್ ಹೌಸ್ ನಲ್ಲಿ ಗುರುವಾರ ಸಂಜೆ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಧಾರವಾಡ ತಾಲೂಕಿನಲ್ಲಿ ನಿರೀಕ್ಷೆಗೂ ಮೀರಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೇಯಾಗುತ್ತಿವೆ. ತಕ್ಷಣವೇ ಪಿಡಿಓ ಹಾಗೂ ನೂಡಲ್ ಅಧಿಕಾರಿಗಳು ಕಾರ್ಯಪ್ರವೃತ್ತರಾಗುವ ಮೂಲಕ ಗ್ರಾಮೀಣ ಭಾಗದಲ್ಲಿ ಕೋವಿಡ್ ತಡೆಗೆ ಶ್ರಮಿಸಬೇಕು ಎಂದು ಸೂಚಿಸಿದರು.
ಕೊರೊನಾ ಪಾಸಿಟಿವ್ ರೋಗಿಗಳಿಗೆ ಈಗಾಗಲೇ ಕ್ಷೇತ್ರದಲ್ಲಿ ಕೋವಿಡ್ ಕೇರ ಸಿದ್ದಪಡಿಸಿದ್ದು, ಹೋಮ್ ಐಸೋಲೆಶನ್ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಗ್ರಾಮಿಣ ಭಾಗದ ಜನರು ಚಿಕಿತ್ಸೆಗೆ ಒಳಗಾಗಲು ಹಿಂಜರಿಯುತ್ತಿದ್ದು, ಅವರನ್ನು ಮನವೊಲಿಸಿ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಬೇಕು ಎಂದರು.
ಕೊರೊನಾ ಬಗ್ಗೆ ಗ್ರಾಮೀಣ ಜನರಿಗೆ ಜಾಗೃತಿ ಮೂಡಿಸುವುದು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವ್ಯಾಕ್ಸಿನೇಷನ್ ಹೆಚ್ಚಿಸಲು ಪ್ರತಿಯೊಬ್ಬರು ಶ್ರಮಿಸೋಣ ಎಂದು ತಿಳಿಸಿದರು. ಸಭೆಯಲ್ಲಿ ಧಾರವಾಡ ತಾಲೂಕ ತಹಶಿಲ್ದಾರ ಸಂತೋಷ ಬಿರಾದಾರ , ಆರೋಗ್ಯಾಧಿಕಾರಿಗಳು ಹಾಗೂ ಪಿಡಿಓಗಳು ಹಾಜರಿದ್ದರು.
ರಾಜ್ಯ ಸರಕಾರವು ಕೃಷಿಕರು,ಹಣ್ಣು ಬೆಳೆಗಾರರು ಹಾಗೂ ಟ್ಯಾಕ್ಸಿ ಚಾಲಕರು ಸೇರಿದಂತೆ ಬಡವರಿಗೆ ಘೋಷಿಸಿರುವ ವಿಶೇಷ ಪ್ಯಾಕೇಜನ್ನು ಪ್ರತಿಯೊಬ್ಬ ಫಲಾನುಭವಿಗಳಿಗೆ ತಲುಪುವಂತಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಅಮೃತ ದೇಸಾಯಿ ಹೇಳಿದರು.

ಸಭೆಯಲ್ಲಿ ಧಾರವಾಡ ತಾಲೂಕ ತಹಶಿಲ್ದಾರ ಸಂತೋಷ ಬಿರಾದಾರ , ಆರೋಗ್ಯಾಧಿಕಾರಿಗಳು ಹಾಗೂ ಪಿಡಿಓಗಳು ಹಾಜರಿದ್ದರು.