ಗ್ರಾಮೀಣಾಭಿವೃದ್ದಿ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಜ.,೩; ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಇವರು ಜ.6 ರಂದು ದಾವಣಗೆರೆ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ.ಅಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆಗೆ ಆಗಮಿಸಿ, ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. ಸಂಜೆ 4 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯಕ್ರಮ ಮತ್ತು ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಸಿ.ಎನ್.ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.