ಗ್ರಾಮೀಣ ಆಟಗಾರರಿಗೆ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳಲು ಪ್ರೇರಣೆಯಾಗಲಿದೆ : ಅಣ್ಣಾಸಾಹೇಬ ಜೊಲ್ಲೆ

ಅಥಣಿ :ನ.6: ಗ್ರಾಮೀಣ ಮತ್ತು ನಮ್ಮ ದೇಶೀಯ ಕ್ರೀಡೆಗಳು ಉಳಿಸಿ ಬೆಳೆಸಬೇಕು. ಕಬಡ್ಡಿ ಆಟ ಇಂದು ಗ್ರಾಮೀಣ ಕ್ರೀಡೆಗೆ ಸೀಮಿತವಾಗಿ ಉಳಿದಿಲ್ಲ ರಾಷ್ಟ್ರಮಟ್ಟದಲ್ಲಿ ಪೆÇ್ರ ಕಬಡ್ಡಿ ಪಂದ್ಯಾಟಗಳು ನಡೆಯುತ್ತವೆ. ನಮ್ಮ ಗ್ರಾಮೀಣ ಆಟಗಾರರು ಕೂಡ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಆಡುವಂತೆ ಪೆÇ್ರೀತ್ಸಾಹಿಸುವ ಉದ್ದೇಶದಿಂದ ಜೊಲ್ಲೆ ಗ್ರೂಪ್ ವತಿಯಿಂದ ಈ ಕಬಡ್ಡಿ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದೆ ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದ ಅಣ್ಣಾಸಾಹೇಬ ಜೋಲ್ಲೆ ಹೇಳಿದರು.
ಅವರು ಶನಿವಾರ ಪಟ್ಟಣದ ಭೋಜರಾಜ ಕ್ರೀಡಾಂಗಣದಲ್ಲಿ ಜೊಲ್ಲೆ ಉದ್ಯೋಗ ಸಮೂಹದ ವತಿಯಿಂದ ಆಯೋಜಿಸಲಾಗಿದ್ದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ತಾಲೂಕ ಮಟ್ಟದ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.
ಭಾರತ ತರುಣರ ದೇಶವಾಗಿದೆ. ನಮ್ಮ ದೇಶದ ಯುವಕ ಯುವತಿಯರು ಸದೃಢವಾದ ದೈಹಿಕ ಸಾಮಥ್ರ್ಯ ಹೊಂದಬೇಕು. ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸು ಇರುತ್ತದೆ. ಆದ್ದರಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢತೆಯನ್ನು ಹೊಂದಲು ಪ್ರತಿಯೊಬ್ಬ ಯುವಕ ಯುವತಿಯರು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ಕ್ರೀಡೆಗಳಲ್ಲಿ ಸೋಲು ಮತ್ತು ಗೆಲುವು ಸಾಮಾನ್ಯ. ಪ್ರತಿಯೊಬ್ಬರಲ್ಲಿ ಕ್ರೀಡಾಮನೋಭಾವ ಬೆಳೆಸಿಕೊಳ್ಳುವುದು ಈ ಆಟದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನೇಕ ಜನಪರ ಯೋಜನೆಗಳು ಅನುಷ್ಠಾನಗೊಂಡಿವೆ. ನಾನು ಸಂಸದನಾದ ಬಳಿಕ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಉಜ್ವಲ್ ಗ್ಯಾಸ್ ಸೌಲಭ್ಯ ಮತ್ತು ರಸ್ತೆ ಕಾಮಗಾರಿಗಳನ್ನು ಕೈಕೊಳ್ಳಲಾಗಿದೆ ಎಂದು ಹೇಳಿದರು.
ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಸಿದ್ದಪ್ಪ ಮುದಕಣ್ಣವರ, ಸಂಕೋನಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ ಕಕಮರಿ ಮಾತನಾಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರು ಗ್ರಾಮೀಣ ಪ್ರತಿಭೆಗಳನ್ನು ಮತ್ತು ಕ್ರೀಡಾಪಟುಗಳನ್ನು ಗುರುತಿಸುವ ಉದ್ದೇಶದಿಂದ ಎಲ್ಲ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಇಂತಹ ಮಹತ್ವಪೂರ್ಣ ಕಾರ್ಯಕ್ರಮಗಳನ್ನ ನಡೆಸುತ್ತಿದ್ದಾರೆ. ಇದರಿಂದ ಗ್ರಾಮೀಣ ಪ್ರತಿಭೆಗಳಿಗೆ ಒಳ್ಳೆಯ ವೇದಿಕೆ ಕಲ್ಪಿಸಿದಂತಾಗಿದ್ದು, ಈ ಪ್ರತಿಭೆಗಳು ಮುಂಬರುವ ದಿನಗಳಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳಲು ಪ್ರೇರಣೆಯಾಗಲಿದೆ ಎಂದು ಹೇಳಿದರು.
ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದ ಜನವಾಡ ಅಲ್ಲಮಪ್ರಭು ಆಶ್ರಮದ ಮಲ್ಲಿಕಾರ್ಜುನ ಸ್ವಾಮೀಜಿ, ತೆಲಸಂಗ ಹಿರೇಮಠದ ವೀರೇಶ ದೇವರು ಮಾತನಾಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಉಮೇಶರಾವ ಬಂತೊದಕರ, ಅನಿಲರಾವ ದೇಶಪಾಂಡೆ, ನಿಂಗಪ್ಪ ನಂದೇಶ್ವರ, ಮಲ್ಲಪ್ಪ ಹಂಚಿನಾಳ. ಗಿರೀಶ ಬುಟಾಳಿ. ಅಣ್ಣಾಸಾಬ ನಾಯಿಕ, ದೀಪಕ ಪಾಟೀಲ, ಮುರುಗೇಶ ಕುಮಟಳ್ಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಪ್ರಭಾಕರ ಚವ್ಹಾಣ ಸ್ವಾಗತಿಸಿದರು. ರಮೇಶ ಪಾಟೀಲ ನಿರೂಪಿಸಿದರು. ಶಿವಾನಂದ ವಾಳ್ವೆ ವಂದಿಸಿದರು.