ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಘೋಷಣೆ: ಕೆಯುಡಬ್ಲ್ಯುಜೆ ಹರ್ಷ

ಬೀದರ್: ಫೆ.17:ಶುಕ್ರವಾರ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮ್ಮ ಬಜೆಟ್‍ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಿಸಿರುವ ಕ್ರಮ ಶ್ಲಾಘನಿಯ ಕಾರ್ಯವಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೀದರ್ ಜಿಲ್ಲಾ ಘಟಕ ತಿಳಿಸಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಕೆ ಗಣಪತಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ ಜಂಟಿ ಹೇಳಿಕೆ ನೀಡಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕವು ಈ ಹಿಂದೆ ಹಲವು ಬಾರಿ ರಾಜ್ಯ ಸರ್ಕಾರಕ್ಕೆ ಈ ಕುರಿತು ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಯಾವ ಪ್ರಯೋಜನ ಆಗಲಿಲ್ಲ. ಇತ್ತಿಚೀಗೆ ದಾವಣಗೆರೆಯಲ್ಲಿ ನಡೆದ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ನಮ್ಮ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳಿಗೆ ಈ ಕುರಿತು ಮಮನವಿ ಸಲ್ಲಿಸಿದರು. ಸಾರಿಗೆ ssಸಚಿವ ರಾಮಲಿಂಗಾರೆಡ್ಡಿ ಸಹ ಸಿಎಂ ಜೊತೆಗಿದ್ದರು. ಉಭಯ ನಾಯಕರ ಸಮ್ಮುಖದಲ್ಲಿ ಸಲ್ಲಿಸಿದ ಮನವಿಗೆ ಇಂದು ಫಲ ನೀಡಿದೆ. ಇದಕ್ಕೆಲ್ಲ ಮುಖ್ಯ ಕಾರಣಿಕರ್ತರಾದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ ಅವರಿಗೆ ಅನಂತ ಕೃತಜ್ಞತೆ ಸಲ್ಲಿಸಲಾಗುವುದೆಂದು
ಈ ಹಿಂದೆ ಸಿದ್ಧರಾಮಯ್ಯನವರು ಸಿಎಂ ಆಗಿದ್ದಾಗಲೂ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗಾಗಿ 500 ಕೋಟಿ ಮೀಸಲಿರಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಪತ್ರಿಕಾ ವಿತರಕರಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿರುವ ಹಾಲಿ ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ಅಭಿನಂದನೆ ಸಲ್ಲಿಸುವುದಾಗಿ, ವಿಶೇಷವಾಗಿ ಹಲವು ವರ್ಷಗಳಿಂದ ನಿರಂತರವಾಗಿ ಈ ಕುರಿತು ಹೋರಾಟ ನಡೆಸಿದ ನಮ್ಮ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ ಲೋಕೇಶ ಸೇರಿದಂತೆ ಎಲ್ಲ ರಾಜ್ಯ ಮಟ್ಟದ ಪದಾಧಿಕಾರಿಗಳಿಗೂ ಧನ್ಯವಾದ ಸಮರ್ಪಿಸುವುದಾಗಿ ಜಿಲ್ಲಾ ಅಧ್ಯಕ್ಷ ಡಿ.ಕೆ ಗಣಪತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ರಾಷ್ಟ್ರೀಯ ಕಾರ್ಯಕಾರ್ಯರಿಣಿ ಸದಸ್ಯರಾದ ಅಪ್ಪಾರಾವ ಸೌದಿ, ದೀಪಕ ಮನ್ನಳ್ಳಿ, ರಾಜ್ಯ ಪ್ರತಿನಿಧಿ ಬಸವರಾಜ ಕಾಮಶೆಟ್ಟಿ, ಉಪಾಧ್ಯಕ್ಷರಾದ ಶ್ರೀನಿವಾಸ ಚೌದ್ರಿ, ಅಬ್ದುಲ್ ಅಲಿ, ನಾಗಶೆಟ್ಟಿ ಧರಂಪುರ, ಕಾರ್ಯದರ್ಶಿ ಪ್ರಥ್ವಿರಾಜ, ಸುನಿಲ ಕುಲಕರ್ಣಿ, ಖಜಾಂಚಿ ಎಂ.ಪಿ ಮುದಾಳೆ, ಎಲ್ಲ ಜಿಲ್ಲಾ ಕಾರ್ಯಕಾರಿ ಸದಸ್ಯರು, ಬಸವಕಲ್ಯಾಣ ತಾಲೂಕಾಧ್ಯಕ್ಷ ಮಾರ್ತಂಡ ಜೋಷಿ, ಪ್ರಧಾನ ಕಾರ್ಯದರ್ಶಿ ಉದಯಕುಮಾರ ಮುಳೆ, ಭಾಲ್ಕಿ ತಾಲೂಕಾಧ್ಯಕ್ಷ ಜಯರಾಜ ದಾಬಶೆಟ್ಟಿ, ಪ್ರಧಾನ ಕಾರ್ಯದರ್ಶಿ ಗಣಪತಿ ಬೋಚರೆ, ಹುಮನಾಬಾದ್ ತಾಲೂಕಾಧ್ಯಕ್ಷ ದುರ್ಯೋಧನ ಹೂಗಾರ, ಪ್ರಧಾನ ಕಾರ್ಯದರ್ಶಿ ವೆಂಕಟ ಜಾಧವ, ಔರಾದ್ ತಾಲೂಕಾಧ್ಯಕ್ಷ ಶಿವಕುಮಾರ ಮುಕ್ತೇದಾರ, ಪ್ರಧಾನ ಕಾರ್ಯದರ್ಶಿ ಸುನಿಲ ಜಿರೋಬೆ, ಚಿಟಗುಪ್ಪ ತಾಲೂಕಾಧ್ಯಕ್ಷ ನವೀನ ಗಂಜಿ, ಪ್ರಧಾನ ಕಾರ್ಯದರ್ಶಿ ಮುಸ್ತಾಫಾ ಖಾದ್ರಿ, ಹುಲಸೂರ ತಾಲೂಕಾಧ್ಯಕ್ಷ ರಾಜಕುಮಾರ ಹೊನ್ನಡ್ಡಿ, ಪ್ರಧಾನ ಕಾರ್ಯದರ್ಶಿ ಶಶಿಕಾಂತ ಕಾನೋಡೆ ಹರ್ಷ ವ್ಯಕ್ತಪಡಿಸಿ ಅಭಿನಂದನೆ ತಿಳಿಸಿದ್ದಾರೆ.