ಗ್ರಾಮೀಣ ಪ್ರದೇಶದಲ್ಲಿ ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ಶಿಂಧೆ ಪ್ರವಾಸ: ಪರಿಶೀಲನೆ

ವಿಜಯಪುರ, ಜು.30-ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ಜುಲೈ 28ರಂದು ಗ್ರಾಮೀಣ ಪ್ರದೇಶದಲ್ಲಿ ಪ್ರವಾಸ ಕೈಗೊಂಡರು.
ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಮತ್ತು ಕಾರಜೊಳ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಹೊನಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರವೊಂದಕ್ಕೆ ಭೇಟಿ ಮಾಡಿ ಕಾಮಗಾರಿಯ ಗುಣಮಟ್ಟ ಪರಿಶೀಲಿಸಿದರು. ಅಲ್ಲಿನ ಗ್ರಂಥಾಲಯಕ್ಕೆ ತೆರಳಿ ಗ್ರಂಥಾಲಯದಲ್ಲಿ ಫರ್ನಿಚರ್ ಕೆಲಸ, ವಿದ್ಯುತ್ ವ್ಯವಸ್ಥೆ, ಕಂಪ್ಯೂಟರ್, ಇಂಟರ್ನೆಟ್ ಸೌಲಭ್ಯ ಹಾಗೂ ಇತ್ಯಾದಿ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲು ಅಲ್ಲಿನ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ನಿರ್ದೇಶನ ನೀಡಿದರು.
ಅದೇ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕು ಸಹ ಭೇಟಿ ಮಾಡಿ, ಅಲ್ಲಿನ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು. ಆಸ್ಪತ್ರೆಯಲ್ಲಿ ಶುಚಿತ್ವ ಕಾಪಾಡಲು, ಸಾರ್ವಜನಿಕರಿಗೆ ತುರ್ತಾಗಿ ಸೌಲಭ್ಯಗಳನ್ನು ಕಲ್ಪಿಸಲು ಅಲ್ಲಿನ ಸಿಬ್ಬಂದಿಗೆ ಸೂಚಿಸಿದರು. ಅದೇ ರೀತಿ ರಾಜೀವ್ ಗಾಂಧಿ ಸೇವಾ ಕೇಂದ್ರಕ್ಕು ಸಹ ಭೇಟಿ ನೀಡಿ ಪರಿಶೀಲಿಸಿದರು.
ಗಂಟೆಯೊಳಗೆ ಶಾಲೆಗೆ ಕಂಪ್ಯೂಟರ್: ನಂತರ ಕಾರಜೋಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಸಿಇಓ ರಾಹುಲ್ ಶಿಂಧೆ ಅವರು ಭೇಟಿ ಮಾಡಿ ಶಾಲಾ ಕೊಠಡಿಗಳು, ಅಡುಗೆ ಕೋಣೆ, ಊಟದ ವ್ಯವಸ್ಥೆ ಕುರಿತು ಮಾಹಿತಿ ಪಡೆದರು. ತಮಗೆ ಕಂಪ್ಯೂಟರ್ ವ್ಯವಸ್ಥೆ ಸಮರ್ಪಕವಾಗಿಲ್ಲ ಎಂದು ವಿದ್ಯಾರ್ಥಿಗಳು ತಿಳಿಸಿದಾಗ ಇದಕ್ಕೆ ತಕ್ಷಣ ಸ್ಪಂದಿಸಿದ ಸಿಇಓ ಅವರು, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮಾಡಲು ಸಹಾಯಕವಾಗುವಂತೆ ಶಾಲೆಗೆ 4 ಕಂಪ್ಯೂಟರ್ ಹಾಗೂ 1 ಪೆÇ್ರಜೆಕ್ಟರ್‍ಗಳನ್ನು ತಾಲೂಕು ಪಂಚಾಯತಿಯಿಂದ ಪೂರೈಸಲು ನಿರ್ದೇಶನ ನೀಡಿದರು. ಸಿಇಓ ಅವರು ಸೂಚನೆ ನೀಡಿದ ಗಂಟೆಯೊಳಗೆ ಆ ಶಾಲೆಗೆ ಕಂಪ್ಯೂಟರ್ ಹಾಗೂ ಪೆÇ್ರಜೆಕ್ಟರ್‍ಗಳನ್ನು ಪೂರೈಸಲಾಯಿತು.
ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರಾಧ ಭಾರತಿ ಹಿರೇಮಠ, ಹೊನಗನಹಳ್ಳಿ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳಾದ ಜಯಶ್ರೀ ಪವಾರ, ಕಾರಜೊಳ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳಾದ ಬಿ.ಪಿ.ಉಪ್ಪಲದಿನ್ನಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಮುಖ್ಯ ಶಿಕ್ಷಕರಾದ ಸತೀಶ ಸಜ್ಜನ, ಗ್ರಾಮ ಪಂಚಾಯತಿಯ ಕಾರ್ಯದರ್ಶಿಗಳಾದ ಹೊನಗನಹಳ್ಳಿ ಅಮೃತ ನಿಂಬಾಳ್ಕರ, ಕಾರಜೊಳದ ಸಂಗಪ್ಪ ಪಡಸಲಗಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಾರ್ಡನ್ ಕವಿತಾ ಹೂಗಾರ ಹಾಗೂ ಇತರರು ಹಾಜರಿದ್ದರು.