ಗ್ರಾಮೀಣ ಭಾಗಗಳಲ್ಲಿ ಹೆಚ್ಚಿದ ಸೋಂಕು

ಹನೂರು:ಏ:28: ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪ್ರಕರಣಗಳು ಕಾಣಿಸಿಕೊಳ್ಳುತ್ತಿರುವುದರಿಂದ ತಾಲ್ಲೂಕಿನ ಐದು ಕಡೆ ಚೆಕ್ ಪೆÇೀಸ್ಟ್ ನಿರ್ಮಿಸಿ ಅಂತರರಾಜ್ಯ ಸಂಚಾರಕ್ಕೆ ನಿಬರ್ಂಧ ವಿಧಿಸಲಾಗಿದೆ.
ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಏ.28 ರಿಂದ ಮೇ 12 ರ ವರೆಗೆ ಲಾಕ್ ಡೌನ್ ಮಾಡಿರುವುದರಿಂದ ಜಿಲ್ಲಾಡಳಿತವು ಈ ಕ್ರಮ ಕೈಗೊಂಡಿದೆ. ಸರಕು ಸಾಗಾಣೆ ವಾಹನಗಳನ್ನು ಹೊರತುಪಡಿಸಿ ಉಳಿದಂತೆ ಅಂತರರಾಜ್ಯ ಸಾರಿಗೆ, ಖಾಸಗಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಭಂಧಿಸಲಾಗಿದೆ. ಈಗಾಗಲೇ ಮೂರು ಕಡೆ ಚೆಕ್ ಪೆÇೀಸ್ಟ್ ಗಳಿದ್ದು ಉಳಿದಂತೆ ಇನ್ನು ಎರಡು ಕಡೆ ಚೆಕ್ ಪೆÇೀಸ್ಟ್ ತೆರೆಯಲಾಗುವುದು ಪೆÇಲೀಸ್ ಇಲಾಖೆ ತಿಳಿಸಿದೆ.
ಹನೂರು ಪೆÇಲೀಸ್ ಠಾಣಾ ವ್ಯಾಪ್ತಿಯ ಅರ್ಧನಾರಿಪುರ, ರಾಮಾಪುರ ಪೆÇಲೀಸ್ ಠಾಣಾ ವ್ಯಾಪ್ತಿಯ ನಾಲ್ ರೋಡ್ ಚೆಕ್ ಪೆÇೀಸ್ಟ್ ಜೊತೆಗೆ ಹೂಗ್ಯಂ ಬಳಿಯ ಮಾಕನಪಾಳ್ಯ ಬಳಿ ಚೆಕ್ ಪೆÇೀಸ್ಟ್ ತೆರೆಯಲಾಗುತ್ತಿದೆ. ಮಲೆಮಹದೇಶ್ವರ ಬೆಟ್ಟದ ಪಾಲಾರ್ ಚೆಕ್ ಪೆÇೀಸ್ಟ್ ಜೊತೆಗೆ ಹೊಗೆನಕಲ್ ಫಾಲ್ಸ್ ಬಳಿಯೂ ಚೆಕ್ ಪೆÇೀಸ್ಟ್ ತೆರೆಯಲು ಪೆÇಲೀಸ್ ಇಲಾಖೆ ಸಿದ್ಧತೆ ನಡೆಸಿದೆ.
ಕೊರೊನಾ ತಡೆಗಟ್ಟುವ ಉದ್ದೇಶದಿಂದ ಸರ್ಕಾರ ಲಾಕ್ ಡೌನ್ ಘೋಷಿಸಿದೆ. ಈ ನಿಟ್ಟಿನಲ್ಲಿ ಅಂತರರಾಜ್ಯ ಗಡಿ ಬಂದ್ ಮಾಡಲಾಗಿದೆ. ಈಗಾಗಲೇ ಅರ್ಧನಾರಿಪುರ ಚೆಕ್ ಪೆÇೀಸ್ಟ್‍ಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗುವುದು. ಠಾಣಾ ವ್ಯಾಪ್ತಿಯ ಗ್ರಾಮಗಳಲ್ಲಿ ಇನ್ನು ಮುಂದೆ ಪ್ರತಿನಿತ್ಯ ಪೆÇಲೀಸ್ ವಾಹನ ಗಸ್ತು ತಿರುಗಲಿದೆ. ಸಾರ್ವಜನಿಕರು ಅನಾವಶ್ಯಕವಾಗಿ ಗುಂಪು ಸೇರುವುದು, ಅನಗತ್ಯವಾಗಿ ಓಡಾಡುವುದು ಕಂಡು ಬಂದರೆ ಕಾನೂನು ಕ್ರಮ ಜರುಗಿಸಲಾಗುವುದು. ಆದ್ದರಿಂದ ಸಾಧ್ಯವಾದಷ್ಟು ಮನೆಯಲ್ಲೇ ಇರುವ ಮೂಲಕ ಸರ್ಕಾರದ ಆದೇಶವನ್ನು ಪಾಲಿಸಬೇಕು ಎಂದು ಹನೂರು ಠಾಣೆಯ ಇನ್ಸ್‍ಪೆಕ್ಟರ್ ಸಂತೋಷ್ ಕಶ್ಯಪ್ ತಿಳಿಸಿದರು.
ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ತಾಲ್ಲೂಕಿನ ಎಲ್ಲಾ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಕೋವಿಡ್ ಲಸಿಕೆ ಅಭಿಯಾನ ನಡೆಯುತ್ತಿದೆ. ಲಾಕ್‍ಡೌನ್ ಇದ್ದರೂ ಲಸಿಕೆ ಹಾಕಿಸಿಕೊಳ್ಳುವವರು ತಮ್ಮ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ಲಸಿಕೆ ಪಡೆದುಕೊಳ್ಳುಬಹುದಾಗಿದೆ.
ಅಲ್ಲದೇ ಎಲ್ಲಾ ಆರೋಗ್ಯ ಕೇಂದ್ರಗಳು ಭಾನುವಾರವೂ ಕಾರ್ಯನಿರ್ವಹಿಸಲಿವೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಪ್ರಕಾಶ್ ಮಾಹಿತಿ ನೀಡಿದ್ದಾರೆ.
ಹೊರಗಿನಿಂದ ಬಂದವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ: ಬೆಂಗಳೂರು, ಮೈಸೂರು, ತಮಿಳುನಾಡು, ಕೇರಳ ಸೇರಿದಂತೆ ಇತರೆ ಪ್ರದೇಶಗಳಿಗೆ ಕೂಲಿ ಕೆಲಸಕ್ಕೆ ಹೋಗಿದ್ದ ಲಾಕ್‍ಡೌನ್ ಇರುವ ಕಾರಣದಿಂದ ಗ್ರಾಮಗಳಿಗೆ ಬಂದರೆ ಅವರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಗಾಗಬೇಕು. ತಮಗೆ ಹತ್ತಿರವಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷೆಗೊಳಗಾಗಿ ಸೋಂಕು ದೃಢಪಟ್ಟರೆ ಕಡ್ಡಾಯವಾಗಿ ಕ್ವಾರಂಟೈನ್ ಆಗಬೇಕು ಎಂದು ತಾಲೂಕು ನೋಡಲ್ ಅಧಿಕಾರಿ ಹಾಗೂ ತಹಶೀಲ್ದಾರ್ ನಾಗರಾಜು ತಿಳಿಸಿದರು.