ಗ್ರಾಮೀಣ ಭಾಗದಲ್ಲಿ ಕಾಮಗಾರಿಗಳಿಗೆ ಚಾಲನೆ

ದಾವಣಗೆರೆ.ಏ.೮:  ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಸಬೆಳವನೂರು, ತುರ್ಚಘಟ್ಟ, ಚಂದ್ರನಹಳ್ಳಿ ಹಾಗೂ ಹೊಸಬಿಸಲೇರಿ ಗ್ರಾಮಗಳಲ್ಲಿ ವಿವಿಧ ಇಲಾಖೆಗಳ ಸಹಕಾರದೊಂದಿಗೆ ನಿರ್ಮಿಸಿರುವ 3.45 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮಾಜಿ ಸಚಿವರೂ, ಹಾಲಿ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪನವರು  ಲೋಕಾರ್ಪಣೆಗೊಳಿಸಿದರು.ಹೊಸಬೆಳವನೂರು ಗ್ರಾಮದ 12 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿರುವ ಡಾ. ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ, 35 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಪಶು ಸಂಗೋಪನಾ ಆಸ್ಪತ್ರೆ, 12 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸೇವಾಲಾಲ್ ಸಮುದಾಯ ಭವನ ಹಾಗೂ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಎಪಿಎಂಸಿ ಗೋಡೌನ್, ತುರ್ಚಘಟ್ಟ ಗ್ರಾಮದಲ್ಲಿ 24 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಡಿಜಿಟಲ್ ಲೈಬ್ರರಿ ಮತ್ತು ವ್ಯಾಯಾಮಶಾಲೆ, 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಶ್ರೀ ಬಾಣದ ರಂಗನಾಥಸ್ವಾಮಿ, 31.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಹೈಸ್ಕೂಲ್ ಕೊಠಡಿ, 1ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಎಪಿಎಂಸಿ ಗೋಡೌನ್, ಚಂದ್ರನಹಳ್ಳಿಯಲ್ಲಿ 24 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿ ಹಾಗೂ ಹೊಸಬಿಸಲೇರಿ ಗ್ರಾಮದಲ್ಲಿ 21.20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳನ್ನು ಸಾರ್ವಜನಿಕರಿಗೆ ಸಮರ್ಪಿಸಿದರು.ವಿವಿಧ ಕಾಮಗಾರಿಗಳನ್ನು ಸಮರ್ಪಿಸಿದ ನಂತರ ಮಾತನಾಡಿದ ಡಾ. ಶಾಮನೂರು ಶಿವಶಂಕರಪ್ಪನವರು ಮಾತನಾಡಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿತ್ತು. ಇಂದು ಈ ಕಾಮಗಾರಿಗಳನ್ನು ಸಾರ್ವಜನಿಕರಿಗೆ ಸಮರ್ಪಿಸಲಾಗಿದ್ದು, ಇನ್ನಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದು, ಅವುಗಳನ್ನು ಶೀಘ್ರ ಲೋಕಾರ್ಪಣೆಗೊಳಿಸಲಾಗುವುದು. ಸಾರ್ವಜನಿಕರು ಈ ಗೋದಾಮು, ಶಾಲಾ ಕೊಠಡಿ ಹಾಗೂ ಭವನಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದರು.ರೈತರಿಗಾಗಿ ನಿರ್ಮಿಸಿರುವ ಗೋದಾಮುಗಳಲ್ಲಿ ರೈತರು ತಾವು ಬೆಳೆದ ಬೆಳೆಗೆ ಸರಿಯಾದ ದರ ಸಿಗದಿದ್ದಲ್ಲಿ ಅದನ್ನು ಗೋದಾಮುಗಳಲ್ಲಿ ಸಂಗ್ರಹಿಸಿ ಉತ್ತಮ ದರ ಬಂದ ವೇಳೆ ಮಾರಾಟ ಮಾಡಬಹುದು ಎಂದರು.ಜಿಲ್ಲಾ ಪಂಚಾಯಿತಿ ಸದಸ್ಯ ಜಿ.ಸಿ.ನಿಂಗಪ್ಪ ಮಾತನಾಡಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಸಾರ್ವಜನಿಕರು ಗಮನಕ್ಕೆ ತರದಿದ್ದರೂ ಸಹ ಸ್ವತಃ ಶಾಸಕರೇ ಸಾರ್ವಜನಿಕರಿಗೆ ಅವಶ್ಯಕತೆ ಇದೆ ಎಂಬ ಮುಂದಾಲೋಚನೆಯಿAದ ಕೈಗೆತ್ತಿಕೊಂಡು ಇಂದು ಸಾರ್ವಜನಿಕರಿಗೆ ಸಮರ್ಪಿಸಿದ್ದಾರೆ ಎಂದರು.ಎಪಿಎAಸಿ ಅಧ್ಯಕ್ಷ ಎಸ್.ಕೆ.ಚಂದ್ರಶೇಖರ್ ಮಾತನಾಡಿ ಈ ಹಿಂದೆ ಶಾಮನೂರು ಶಿವಶಂಕರಪ್ಪನವರು ಸಚಿವರಾಗಿದ್ದ ವೇಳೆ ಈ ಭಾಗದಲ್ಲಿ ರೈತರ ರಸ್ತೆಗಳನ್ನು ಅಭಿವೃದ್ಧಿಗೊಳಿಸಿದ್ದರು. ಜೊತೆಗೆ ಅಂದೇ ನಬಾರ್ಡ್ ಸಹಕಾರದೊಂದಿಗೆ ಗೋದಾಮುಗಳನ್ನು ನಿರ್ಮಿಸಲು ಶಿಫಾರಸ್ಸು ಮಾಡಿದ್ದರು.ನಂತರ ಅವರ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಸಚಿವರಾದ ವೇಳೆ ಗೋದಾಮುಗಳ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದರೂ ಕೆಲವು ತಾಂತ್ರಿಕ ಕಾರಣಗಳಿಂದ ವಿಳಂಬವಾಗಿ ಇಂದು ರೈತರ ಉಪಯೋಗಕ್ಕೆ ಸಮರ್ಪಿಸಲಾಗಿದ್ದು, ಗೋದಾಮುಗಳನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶ್ರೀಮತಿ ಸಾಕಮ್ಮ ಗಂಗಾಧರನಾಯ್ಕ, ಎಪಿಎಂಸಿ ಉಪಾಧ್ಯಕ್ಷ ಬಿಸಲೇರಿ ಈರಣ್ಣ, ಸದಸ್ಯ ದೊಗ್ಗಳ್ಳಿ ಬಸವರಾಜ್, ತಾಲ್ಲೂಕು ಪಂಚಾಯಿತಿ ಸದಸ್ಯ ಮಂಜಪ್ಪ, ಮೀನಾ ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ತುರ್ಚಘಟ್ಟದ ಬಸವರಾಜಪ್ಪ, ಬೆಳವನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್.ಕೆ.ಮಾಲತೇಶ್, ಉಪಾಧ್ಯಕ್ಷೆ ಶೃತಿ ನಾಗರಾಜ್, ಮತ್ತು ಸದಸ್ಯರುಗಳು, ಮುಖಂಡರುಗಳಾದ ತೆಂಗಿನಮರದ ಬಸವರಾಜಪ್ಪ, ಹನುಮಜ್ಜ, ಸತೀಶ್, ಕರಿಬಸಪ್ಪ, ರಿಯಾಜ್ ಅಹ್ಮದ್, ಅನ್ವರ್, ಬಸವನಗೌಡ್ರುಉಪಸ್ಥಿತರಿದ್ದರು.
Attachments area