ಗ್ರಾಮೀಣ ಭಾಗದ ಜನರ ಆರ್ಥಿಕ ಮಟ್ಟ ಸುಧಾರಿಸಲು ನರೇಗಾ ಯೋಜನೆ ಸಹಕಾರಿ: ಸಿಇಓ ಡಾ. ಗಿರೀಶ್ ಬದೋಲೆ

ಬೀದರ್:ಫೆ.3: ನರೇಗ ಯೋಜನೆಯು ಗ್ರಾಮೀಣ ಭಾಗದ ಜನರಿಗೆ ಜೀವನದ ಆರ್ಥಿಕ ಮಟ್ಟ ಸುಧಾರಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ದಿಲೀಪ್ ಬದೋಲೆ ಹೇಳಿದರು.
ಶುಕ್ರವಾರ ಬೀದರ್ ತಾಲ್ಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ಆಯೋಜಿಸಿದ ನರೇಗಾ ದಿವಸ್ ಅಂಗವಾಗಿ ಆರೋಗ್ಯ ತಪಾಸಣೆ ಹಾಗೂ ನರೇಗಾ ಕೆಲಸದಲ್ಲಿ ನೂರು ದಿವಸ ಪೂರೈಸಿದ ಕಾರ್ಮಿಕರ ಸನ್ಮಾನ ಕಾರ್ಯಕ್ರಮಕ್ಕೆ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿ
ಮಾತನಾಡಿದರು.
ನರೇಗ ಯೋಜನೆಯ ಲಾಭ ಪಡೆದಲ್ಲಿ ಗ್ರಾಮೀಣ ಭಾಗದ ಜನರು ಪಟ್ಟಣಗಳಿಗೆ ಗುಳೆ ಹೊಗುವುದನ್ನು ತಪ್ಪಿಸಬಹುದು ಎಂದು ಹೇಳಿದರು.
ತಾಲ್ಲೂಕ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಮಾತನಾಡಿ, ನರೇಗಾ ಕೂಲಿ ಕಾರ್ಮಿಕ ಆರೋಗ್ಯದ ದೃಷ್ಠಿಯಿಂದ ಇಂದು ಆರೋಗ್ಯ ತಪಾಸಣೆ ಶಿಬಿರ ಆಯೋಜನೆ ಮಾಡಲಾಗಿದೆ
ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರು ಜೀವ ಹಾಗೂ ಆರೋಗ್ಯ ವಿಮೆಗಳಾದ ಪ್ರಧಾನಮಂತ್ರಿ ಜೀವನ ಭೀಮಾ ಜ್ಯೋತಿ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಯೋಜನೆಯ ಲಾಭ ಪಡೆಯಬೇಕೆಂದರು.
ನರೇಗ ಯೋಜನೆಯ ಸಹಾಯಕ ನಿರ್ದೇಶಕಿ ಲಕ್ಷ್ಮೀ ಬಿರಾದಾರ ಮಾತನಾಡಿ, ಗ್ರಾಮೀಣ ಭಾಗದ ಜನರಿಗೆ ತಮ್ಮ ಗ್ರಾಮಗಳಲ್ಲಿಯೇ ಉದ್ಯೋಗ ಅವಕಾಶ ಕಲ್ಪಿಸಬೇಕು ಎನ್ನುವ ಉದ್ದೇಶದಿಂದ ನರೇಗ ಯೋಜನೆ ಜಾರಿಗೆ ತರಲಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷೆ ಮಹಾದೇವಿ ,ಪಿಡಿಓ ಪ್ರೇಮಿಲಾ ಗ್ರಾ.ಪಂ.ಕಾರ್ಯದರ್ಶಿ ಬಾಲಾಜಿ ಎಸ್.ಡಿ.ಎ ಸಂತೋಷಕುಮಾರ ಮೆತ್ರೆ , ಟಿಸಿ ಅಮರ್ ಬಿರಾದಾರ್ , ನಾಗಣ್ಣಾ, ಜಿಪಂ ಆರೋಗ್ಯ ಸಂಯೋಜಕರು ಶಿವಕುಮಾರ್ ಎದ್ಲಾಪುರೆ, ಐಇಸಿ ಸಂಯೋಜಕ ಸತ್ಯಜೀತ ನಿಡೊದಕರ್ ಸೇರಿದಂತೆ ಗ್ರಾ.ಪಂ.ಸದಸ್ಯರು, ಗ್ರಾಮಸ್ಥರು ಹಾಗೂ ಕಾರ್ಮಿಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.