ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಿಸಿ

ಬೀದರ್: ಜು.20:ಗ್ರಾಮೀಣ ಭಾಗದ ಪತ್ರಕರ್ತರಿಗೆ ಒಡಾಡಲು ಅನುಕೂಲವಾಗುವಂತೆ ಕರ್ನಾಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಉಚಿತ ಬಸ್ ಪಾಸ್ ಕೊಡಬೇಕು ಎಂದು ಬೀದರಿನ ನೌಬಾದ ಪ್ರತಾಪನಗರದಲ್ಲಿರುವ ಬೀದರ ಸಾರಿಗೆ ಅಧಿಕಾರಿಗಳ ಕಚೇರಿಯ ನೂತನ ಕಟ್ಟಡ ನಿರ್ಮಾಣ ಅಡಿಗಲ್ಲು ಸಮಾರಂಭಕ್ಕೆ ಇಂದು ಆಗಮಿಸಿದ್ದ ಸಾರಿಗೆ ಸಚಿವರು ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಶ್ರೀರಾಮಲು ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾದ ಅಶೋಕಕುಮಾರ ಕರಂಜಿ ಅವರು ಮನವಿ ಪತ್ರ ಸಲ್ಲಿಸಿದ್ದರು.ಕಳೆದ ಫೆಬ್ರವರಿ ತಿಂಗಳಲ್ಲಿ ಕಲಬುರಗಿ ಮಹಾನಗರದಲ್ಲಿ ನಡೆದ ಪತ್ರಕರ್ತರ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಬಸವರಾಜ ಬೋಮ್ಮಾಯಿ ಅವರು ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲಾಗುವುದು ಎಂದು ಭರವಸೆ ನೀಡಿದ್ದರು.ಈ ಸಮಬಂಧ ಇಂದಿಲ್ಲಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾದ ಅಶೋಕಕುಮಾರ ಕರಂಜಿ ಅವರು ಸಾರಿಗೆ ಸಚಿವ ಬಿ. ಶ್ರೀರಾಮಲು ಅವರಿಗೆ ಮನವಿ ಪತ್ರ ಸಲ್ಲಿಸುವ ಮೂಲಕ ಗ್ರಾಮೀಣ ಪ್ರದೇಶದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಶೀಘ್ರವೇ ನೀಡಬೇಕು ಎಂದು ಕೋರಿದ್ದರು.

ಈ ಸಂದರ್ಭದಲ್ಲಿ ಪತ್ರಕರ್ತರಾದ ನಾಗಶೆಟ್ಟಿ ಧರಂಪೂರ ಮತ್ತು ವಿಶ್ವ ವಡಗಾಂವ ಅವರು ಸೇರಿದಂತೆ ಇತರರು ಇದ್ದರು.