
ಕರಜಗಿ :ಮಾ.13:ಗ್ರಾಮೀಣ ಭಾಗದ ಮಹಿಳೆಯರು ಸ್ವಯಂ ಉದ್ಯೋಗ ಪಡೆಯುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಮೂಲಕ ಉಚಿತ ಟೈಲರಿಂಗ್ ತರಬೇತಿ ಪ್ರಾರಂಭಿಸಲಾಗಿದೆ.
ಅರ್ಹ ಫಲಾನುಭವಿಗಳು ಈ ತರಬೇತಿ ಲಾಭ ಪಡೆದುಕೊಳ್ಳಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಶಿವರಾಜ ಆಚಾರ್ಯ ಹೇಳಿದರು.
ಅವರು ಅಫಜಲಪುರ ತಾಲೂಕಿನ ಮಣ್ಣೂರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿರುವ ಟೈಲರಿಂಗ್ ತರಬೇತಿ ಪಡೆದ ಫಲಾನುಭವಿಗಳಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ
ಸಂಸ್ಥೆ ಕಳೆದ ಏಳು ವರ್ಷಗಳಿಂದ ವೀರೇಂದ್ರ ಹೆಗಡೆಯವರ,ಮಾರ್ಗದರ್ಶನದಲ್ಲಿ ಗ್ರಾಮೀಣ ಭಾಗಗಳಲ್ಲಿ ಸಮಾಜದ ಸರ್ವತೋಮುಖ ಅಭಿವೃದ್ದಿಗೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತಿದೆ. ಅರ್ಹ ಫಲಾನುಭವಿಗಳು ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು
ಈ ಸಂದರ್ಭದಲ್ಲಿ ಪಾರ್ವತಿ ಮಠಪತಿ ವಲಯ ಮೇಲ್ವಿಚಾರಕ ಅನೀಲ ದಾವಣೆ ಸುಮಂಗಲಾ ಶಿವೂರ ವಿದ್ಯಾವತಿ ಸೇರಿದಂತೆ ಸ್ವಸಹಾಯ ಸಂಘದ ಸದಸ್ಯರಿದ್ದರು.