ಗ್ರಾಮೀಣ ಸೊಗಡಿನ `ಕಾಸಿನ ಸರ…’

ವಿಭಿನ್ನ‌ ಪಾತ್ರಗಳ ಮೂಲಕ ಗಮನ ಸೆಳೆದಿರುವ ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಇದೀಗ ” ಕಾಸಿನ‌ ಸರ” ತೊಡಲು ಮುಂದಾಗಿದ್ದಾರೆ.ಜೊತೆಗೆ ಕೃಷಿ ವಿದ್ಯಾರ್ಥಿನಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ನಟ ವಿಜಯ್ ರಾಘವೇಂದ್ರ ರೈತ ಹೋರಾಟಗಾರರಾಗಿ  ಕಾಣಿಸಿಕೊಳ್ಳುವ ಮೂಲಕ ಇಬ್ಬರೂ ಹೊಸತನದ ಪಾತ್ರ ಮಾಡುತ್ತಿದ್ದಾರೆ. ನಂಜುಂಡೇಗೌಡ ನಿರ್ದೇಶನದ  “ಕಾಸಿನ‌ ಸರ”

ಗ್ರಾಮೀಣ ಸೊಗಡಿನ ಕೌಟುಂಬಿಕ ಕತೆ ಒಳಗೊಂಡ  ಚಿತ್ರಕ್ಕೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ ಹರೀಶ್, ಮಾಜಿ ಅಧ್ಯಕ್ಷ ಚಿನ್ನೇಗೌಡ ಮತ್ತಿತರು ಶುಭಹಾರೈಸಿದರು.

ನಾಯಕ ವಿಜಯ ವಿಜಯ್ ರಾಘವೇಂದ್ರ ಮಾತನಾಡಿ, ಕಾಸಿನ ಸರ ಎನ್ನುವುದು ಬರೀ ಒಡವೆಯಲ್ಲ. ಗ್ರಾಮೀಣ ಭಾಗದಲ್ಲಿ ಕಾಸಿನ ಸರಕ್ಕೆ ಅದರದ್ದೇ ಆದ ಮಹತ್ವವಿದೆ. ಅದು ಬರೀ ಆಡಂಬರವಲ್ಲ. ಅದಕ್ಕೊಂದು ಒಳಾರ್ಥವಿದೆ. ಜೊತೆಗೆ ರೈತರ ಸಮಸ್ಯೆಗಳೂ  ಇವೆ. ರೈತ ಹೋರಾಟಗಾರನಾಗಿ ಕಾಣಿಸಿಕೊಳ್ಳುತ್ತಿದ್ದೇನೆ ಎಂದರು.

ಹರ್ಷಿಕಾ ಪೂಣಾಚ್ಛ ಮಾತನಾಡಿ,. ಕೃಷಿ ವಿದ್ಯಾರ್ಥಿನಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಓದು ಮುಗಿಸಿ ಐಟಿ ಕಂಪನಿಗಳಲ್ಲಿ, ವಿದೇಶಗಳಲ್ಲಿ ಕೆಲಸ ಹುಡುಕುತ್ತಿರುವ ಸಂದರ್ಭದಲ್ಲಿ ಕೃಷಿಯಲ್ಲಿ ತೊಡಗಿಸಿಕೊಳ್ಳುವ ಯುವತಿಯ ಪಾತ್ರ ಮಾಡುತ್ತಿದ್ದೇನೆ. ಇಷ್ಟು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ನಾನು ಇಂಥದ್ದೊಂದು ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಇದೊಂದು ನೈಜ ಪಾತ್ರವಾಗಿದ್ದು ಅಭಿನಯಕ್ಕೆ ಸಾಕಷ್ಟು ಪ್ರಾಮುಖ್ಯತೆ ಇದೆ’ ಎಂದರು.

ನಿರ್ದೇಶಕ ನಂಜುಂಡೇಗೌಡ ಮಾತನಾಡಿ,  ಕಾಸಿನ ಸರ ಆಭರಣವಲ್ಲ. ಅದಕ್ಕೆ ಮೌಲ್ಯ  ಪರಂಪರೆ, ಸಂಪ್ರದಾಯವಿದೆ. ಅದೇ ರೀತಿ ಕೃಷಿಗೂ ತನ್ನದೇ ಆದ ಪರಂಪರೆ ಸಂಪ್ರದಾಯವಿದೆ. ಅದನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡುತ್ತಿದ್ದೇವೆ.  ಗ್ರಾಮೀಣ ಭಾಗದ ಕಥೆಯಾದ್ದರಿಂದ ಚೆನ್ನಪಟ್ಟಣ್ಣ, ಮಳವಳ್ಳಿ ಮುಂತಾದ ಕಡೆ 40 ದಿನಗಳ ಚಿತ್ರೀಕರಣ ನಡೆಯಲಿದೆ’ ಎಂದರು.

ನಿರ್ಮಾಪಕ ದೊಡ್ಡನಾಗಯ್ಯ ಮಾತನಾಡಿ, ಚಿಕ್ಕಬಜೆಟ್ ನ ಚಿತ್ರಗಳ ಮೂಲಕ ಹೊಸ ಪ್ರತಿಭೆಗಳ ಅವಕಾಶ ನೀಡುವುದರ ಜೊತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಬೇಕು ಎಂಬ ಅಭಿಲಾಷೆಯೊಂದಿಗೆ ಚಿತ್ರ ನಿರ್ಮಿಸಲಾಗುತ್ತಿದೆ. ಚಿತ್ರೀಕರಣ ಆರಂಭವಾಗಿದೆ. ಚಿತ್ರದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯವಿದೆ’ ಎಂದರು.

 .