ಗ್ರಾಮ ಆರೋಗ್ಯ ಕಾರ್ಯಕ್ರಮ

ಗುರುಮಠಕಲ:ಮೇ.26:ಯಾದಗಿರಿ ಜಿಲ್ಲೆಯ ಗುರುಮಠಕಲ ತಾಲ್ಲೂಕಿನ ಕಾಕಲವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬೂದುರ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಸ್ಥಳದಲ್ಲಿ ಕೂಲಿ ಕಾರ್ಮಿಕರಿಗೆ ಗ್ರಾಮ ಆರೋಗ್ಯ ಕಾರ್ಯಕ್ರಮದ ಮೂಲಕ ಆರೋಗ್ಯ ತಪಾಸಣೆ ಮಾಡಲಾಯಿತು.
ಕಾರ್ಯಕ್ರಮಕ್ಕೆ ತಾಲೂಕು ಪಂಚಾಯತ ಕಾರ್ಯನಿರ್ವಾಹ ಅಧಿಕಾರಿಗಳು ಎಸ್.ಎಸ್. ಕಾದ್ರೊಳ್ಳಿ ರವರ ನೇತೃತ್ವದಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮ ನಡೆಸಲಾಯಿತು…
ಬಿಪಿ, ಶುಗರ್ ಮತ್ತು ರಕ್ತದೊತ್ತಡ ಬಗ್ಗೆ ತಪಾಸಣೆ ಮಾಡಲಾಯಿತು ಕೂಲಿ ಕಾರ್ಮಿಕರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ಗ್ರಾಮ ಆರೋಗ್ಯ ತಪಾಸಣೆ ಕುರಿತು ರಾಮಚಂದ್ರ ಬಸೂದೆ ರವರು ಮಾತನಾಡಿ, ಗ್ರಾಮ ಪಂಚಾಯತಿ ಆರೋಗ್ಯ ಅಮೃತ ಅಭಿಯಾನದಡಿ 2023 ಮೇ 22ರಿಂದ ಜೂನ್ 22ರವರೆಗೆ ಮನರೇಗಾ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಲು ಗ್ರಾಮ ಆರೋಗ್ಯ ಕಾರ್ಯಕ್ರಮ ಆರಂಬಿಸಿದ್ದು, ಕೂಲಿಕಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಇದೇ ವೇಳೆ ಕೂಲಿಕಾರರ ಸಮಸ್ಯೆಗಳನ್ನು ಆಲಿಸಿ, ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರಿಗೆ ಸೂಚಿಸಿದರು.
ಈ ವೇಳೆ ಸಹಾಯಕ ನಿರ್ದೇಶಕ (ಗ್ರಾ.ಉ.) ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಆರೋಗ್ಯ ಸಿಬ್ಬಂದಿಗಳು, ಕೆ ಎಚ್ ಪಿ ಟಿ. ಟಿ ಏ ಈ. ಟಿ ಐ ಈ ಸಿ, ಬಫ್ಟ್, ಡಿ ಈ ಓ.ತಾಲೂಕು ಸಂಯೋಜಕರು ಹಾಗೂ ಕೂಲಿಕಾರರು ಇದ್ದರು