
ವಿಜಯಪುರ:ಫೆ.23: ವಿಜಯಪುರ ಜಿಲ್ಲೆಯು ಮಾರ್ಚ್-2022ರ ಮಾಹೆಯಲ್ಲಿ ಅತಿ ಹೆಚ್ಚು ನಾಗರಿಕರಿಗೆ ಗ್ರಾಮ ಒನ್ ಕೇಂದ್ರಗಳಿಂದ ಸೇವೆಯನ್ನು ಒದಗಿಸುವ ಮೂಲಕ ವಿಶಿಷ್ಟ ಸಾಧನೆಗೈದಿರುವುದನ್ನು ಪರಿಗಣಿಸಿ, ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಪ್ರಶಂಸನಾ ಪತ್ರ ನೀಡಿದ್ದಾರೆ.
ಬುಧವಾರ ಬೆಂಗಳೂರಿನ ವಿಕಾಸಸೌಧದಲ್ಲಿ ಜರುಗಿದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಮ್ಮಿಕೊಂಡ ಗ್ರಾಮ ಒನ್ ಯೋಜನೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಮಹಾಂತೇಶ ದಾನಮ್ಮನವರ ಅವರು ಮುಖ್ಯಮಂತ್ರಿಗಳಿಂದ ಪ್ರಶಂಸನಾ ಪತ್ರ ಹಾಗೂ ಒಂದು ಲಕ್ಷ ರೂ. ಚೆಕ್‍ನ್ನು ಸ್ವೀಕರಿಸಿದರು.
ಜಿಲ್ಲೆಯಲ್ಲಿ 291 ಗ್ರಾಮ ಒನ್ ಕೇಂದ್ರಗಳು ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದು, 13 ಲಕ್ಷ ಅರ್ಜಿಗಳನ್ನು ಸ್ವೀಕರಿಸಿ ನಾಗರಿಕರಿಗೆ ವಿವಿಧ ಸೇವೆಗಳನ್ನು ಈ ಕೇಂದ್ರಗಳ ಮೂಲಕ ಒದಗಿಸಲಾಗಿದೆ.