ಗ್ರಾಮ ಪಂಚಾಯತಿಯ ಮೂಲಕ ಕುಡಿಯುವ ನೀರಿಗೆ ಆದ್ಯತೆ ನೀಡಿ: ರಾಹುಲ್ ಶಿಂಧೆ

ವಿಜಯಪುರ: ಜೂ.21:ಗ್ರಾಮ ಪಂಚಾಯತಿಯಲ್ಲಿನ ಅನುದಾನ ಬಳಕೆ ಮಾಡಿಕೊಂಡು ಕುಡಿಯುವ ನೀರು ಪೂರೈಸಲು ಆದ್ಯತೆ ನೀಡುವಂತೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂದೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಗಳವಾರ ತಿಕೋಟಾ ತಾಲೂಕಿಗೆ ಭೇಟಿ ನೀಡಿ, ಕುಡಿಯುವ ನೀರಿನ ಸಮಸ್ಯೆ ಇರುವ ವಿವಿಧ ಗ್ರಾಮಗಳಲ್ಲಿ ಗ್ರಾಮ ಪಂಚಾಯತಿ ವತಿಯಿಂದ ಕೈಗೊಂಡ ಕಾರ್ಯಗಳ ಪರಿಶೀಲನೆ ನಡೆಸಿದ ಅವರು, ಲೋಹಗಾಂವ ಗ್ರಾಮ ಪಂಚಾಯತಿಯ ಕಿಲ್ಲಾರಹಟ್ಟಿ ಮತ್ತು ಇಟ್ಟಂಗಿಹಾಳ ತಾಂಡಾ-2ಕ್ಕೆ ಭೇಟಿ ನೀಡಿ ಗ್ರಾಮ ಪಂಚಾಯತಿ ವತಿಯಿಂದ ಟ್ಯಾಂಕರ್ ಮೂಲಕ ನೀರು ಪೆÇರೈಕೆಯಾಗುತ್ತಿದ್ದು, ಕೊಳವೆ ಬಾವಿ ಕೊರೆಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಾಲಗೇರಿ ಗ್ರಾಮದಲ್ಲಿಯೂ ಸಹ ಗ್ರಾಮ ಪಂಚಾಯತಿ ಮೂಲಕ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೆÇರೈಕೆ ಮಾಡುತ್ತಿದ್ದು, ಗ್ರಾಮಕ್ಕೆ ಕುಡಿಯುವ ನೀರು ಪೂರೈಸಲು ಗ್ರಾಮದ ವಿರಭದ್ರೇಶ್ವರ ತೋಟದಿಂದ ಪೈಪ್ ಲೈನ್ ಮೂಲಕ ಗ್ರಾಮಸ್ಥರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು.. ಟಕ್ಕಳಕಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಟಕ್ಕಳಕಿ, ಇಂದಿರಾ ನಗರ ಮತ್ತು ಜಾಧವ ನಗರ (ಗದಿ ವಸ್ತಿ) ಕೊಳವೆ ಬಾವಿ ಕೊರೆಯಿಸುವಂತೆ ತಿಳಿಸಿದರು. ಗ್ರಾಮ ಪಂಚಾಯತಿ ಸದಸ್ಯರು ಹೊಸದಾಗಿ ‘ತೆರೆದ ಬಾವಿ’, ತೋಡಿಸುವ ಮನವಿಗೆ ಒಪ್ಪಿಗೆ ಸೂಚಿಸಿ ಶೀಘ್ರವೇ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಯೋಜನೆ ತಯಾರಿಸಿ ಸಲ್ಲಿಸಲು ಸ್ಥಳದಲ್ಲಿದ್ದ ಗ್ರಾಮ ಪಂಚಾಯತಿ ಪಿಡಿಒಗೆ ಸೂಚನೆ ನೀಡಿದರು.
ಗ್ರಾಮೀಣ ಭಾಗದಲ್ಲಿ ಯಾವದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಗಮನ ಹರಿಸಬೇಕು. ಲಭ್ಯವಿರುವ ನೀರನ್ನು ಸದ್ಬಳಕೆ ಮಾಡಿಕೊಳ್ಳಬೇಕು. ನೀರಿನ ಅಭಾವ ತೊಲಗಿಸಲು ಗ್ರಾಮ ಪಂಚಾಯತಿಗೆ ಗ್ರಾಮಸ್ಥರ ಸಹಕಾರ ಮುಖ್ಯವಾಗಿದ್ದು, ಗ್ರಾಮಸ್ಥರು ಸಹಕರಿಸಬೇಕು. ಖಾಸಗಿ ಕೊಳವೆಭಾವಿಗಳಲ್ಲಿ ಅಧಿಕ ಪ್ರಮಾಣದಲ್ಲಿ ನೀರಿನ ಲಭ್ಯತೆ ಹೊಂದಿದವರನ್ನು ಮನವೊಲಿಸಿ ಗ್ರಾಮಸ್ಥರಿಗೆ ನೀರು ಪೂರೈಸಲು ಕ್ರಮ ವಹಿಸಬೇಕು. ಕುಡಿಯುವ ನೀರಿನ ಸಮಸ್ಯೆಯಿರುವ ಗ್ರಾಮಗಳಲ್ಲಿ ಆಧ್ಯತೆಯ ಮೇರೆಗೆ ಅನ್ಯ ಮಾರ್ಗಗಳಿಂದ ನೀರು ಪೆÇರೈಕೆ ಮಾಡಲು ಗ್ರಾಮ ಪಂಚಾಯತಿ ಸದಾ ಸಿದ್ಧವಾಗಿರಬೇಕು. ಗ್ರಾಮ ಪಂಚಾಯತಿಗೆ ಸರಕಾರದಿಂದ ಬರುವ ಎಲ್ಲ ಅನುದಾನಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಟ್ಯಾಂಕರ್ ಮೂಲಕ ನೀರು ಹಂಚಿಕೆ ಮಾಡುವ ಮುನ್ನ ನೀರನ್ನು ಪರಿಶೀಲನೆ ನಡೆಸಿ, ಕುಡಿಯಲು ಯೋಗ್ಯವಾದ ನೀರನ್ನು ಮಾತ್ರ ಪೆÇರೈಕೆ ಮಾಡಬೇಕು. ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಾಗ ಕಡ್ಡಾಯವಾಗಿ ಗ್ರಾಮ ಪಂಚಾಯತಿ ವಾಟರಮ್ಯಾನ ಹಾಜರಿದ್ದು, ಜನರಿಗೆ ಮ್ಯಾಪಿಂಗ್ ಮಾಡುವ ಮೂಲಕ ನೀರನ್ನು ಪೆÇರೈಕೆ ಮಾಡುವಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವರಾಜ ಐನಾಪುರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಬಿ.ಬಿ.ಜಂಗಮಶೆಟ್ಟಿ, ಶಾಖಾ ಅಧಿಕಾರಿಗಳಾದ ಗಂಗಾಧರ ಶಿಲವಂತ, ಜಾಲಗೇರಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಭೀಮು ಚವ್ಹಾಣ, ನರೇಗಾ ಯೋಜನೆಯ ಸಹಾಯಕ ನಿರ್ದೇಶಕರಾದ ಎಂ.ಬಿ.ಮನಗೂಳಿ, ಐಇಸಿ ಸಂಯೋಜಕ ಕಲ್ಲಪ್ಪ ನಂದರಗಿ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಪದ್ಮಿನಿ ಬಿರಾದಾರ, ಸವಿತಾ ಗದಗ, ಅಕ್ಕಮಹಾದೇವಿ ಪವಾರ ಸೇರಿದಂತೆ ಗ್ರಾಮ ಪಂಚಾಯತಿಯ ಸದಸ್ಯರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.