ಗ್ರಾಮ ಪಂಚಾಯಿತಿಗಳಿಗೆ ಆರೋಗ್ಯ ಕಿಟ್ ವಿತರಿಸಿದ ಜಿ.ಪಂ ಸಿಇಒ

ಚಿತ್ರದುರ್ಗ.ಜ.14:ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಆರೋಗ್ಯ ಅಮೃತ ಅಭಿಯಾನದಡಿ ಆರೋಗ್ಯ ಕಿಟ್‍ಗಳ ವಿತರಣಾ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಸ್.ದಿವಾಕರ ಚಾಲನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಗ್ರಾಮ ಪಂಚಾಯಿತಿಗಳಿಗೆ ಆರೋಗ್ಯ ಅಮೃತ ಅಭಿಯಾನದಡಿ ಆರೋಗ್ಯ ಕಿಟ್ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ಎಸ್.ರಂಗಸ್ವಾಮಿ, ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ಯೋಜನಾ ನಿರ್ದೇಶಕ ಕೆ.ಎನ್.ಮಹಾಂತೇಶಪ್ಪ ಸೇರಿದಂತೆ ಜಿಲ್ಲೆಯ ಎಲ್ಲಾ ಪಿಡಿಒ, ಕೆ.ಹೆಚ್.ಪಿ.ಟಿ. ಸಿಬ್ಬಂದಿ ಇದ್ದರು.